ಪೊನ್ನAಪೇಟೆ, ಮೇ ೫: ಬಿ. ಶೆಟ್ಟಿಗೇರಿ ಗ್ರಾಮದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಗ್ರಾಮವನ್ನು ನಿಷೇಧಿತ ವಲಯವನ್ನಾಗಿ ಪರಿಗಣಿಸಲು ಗ್ರಾಮ ಟಾಸ್ಕ್ಫೋರ್ಸ್ ಮೂಲಕ ನಿರ್ಣಯಿಸಿದ್ದು, ತಹಶೀಲ್ದಾರರಿಗೆ ಮಾಹಿತಿ ನೀಡಿ ಬಿ. ಶೆಟ್ಟಿಗೇರಿಯನ್ನು ಸದ್ಯದ ಮಟ್ಟಿಗೆ ನಿಷೇಧಿತ ವಲಯವನ್ನಾಗಿ ಮಾಡಲು ತೀರ್ಮಾನಿಸಲಾಗಿದೆ. ಬಿ. ಶೆಟ್ಟಿಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಅನಗತ್ಯ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಮಾಹಿತಿ ನೀಡಿದರು.
ಬಿ. ಶೆಟ್ಟಿಗೇರಿ ಗ್ರಾ.ಪಂ. ಸದಸ್ಯೆ ಹಾಗೂ ಕೋವಿಡ್ ಟಾಸ್ಕ್ಫೋರ್ಸ್ ಅಧ್ಯಕ್ಷೆ ಕಾವೇರಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಶೆಟ್ಟಿಗೇರಿ, ಕುಟ್ಟಂದಿ, ಕೊಂಗಣ ಗ್ರಾಮದ ಕೋವಿಡ್ ಟಾಸ್ಕ್ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು ಈ ಭಾಗದಲ್ಲಿ ಕೊರೊನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿದ್ದು, ಧ್ವನಿವರ್ಧಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಸೋಂಕಿತರು ಇರುವ ಮನೆ, ರಸ್ತೆಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದ್ದು, ಕೋವಿಡ್ ಲಸಿಕೆ ಪಡೆಯಲು ಆನ್ಲೈನ್ ಮೂಲಕ ನೋಂದಣಿ ಮಾಡಿಸಲಾಗುತ್ತಿತ್ತು. ಈವರೆಗೆ ೧೨೦ ಮಂದಿ ಹೆಸರು ನೋಂದಾಯಿಸಿಕೊAಡಿದ್ದಾರೆ ಎಂದರು.
ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರ ಮಾಹಿತಿಯನ್ನು ಪಡೆದು ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗುವುದು. ಕೊರೊನಾ ಸೋಂಕನ್ನು ನಿರ್ಲಕ್ಷö್ಯ ಮಾಡದೆ ಪ್ರತಿಯೊಬ್ಬರೂ, ಮಾಸ್ಕ್ ಧರಿಸಿ, ಅಂತರ
(ಮೊದಲ ಪುಟದಿಂದ) ಕಾಯ್ದುಕೊಂಡು ಕೊರೊನಾ ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿಯೊAದಿಗೆ ಸಹಕರಿಸಬೇಕು ಎಂದರು. ಸಾರ್ವಜನಿಕರು ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ೯೪೮೦೮೬೯೩೮೯ ಗೆ ಸಂಪರ್ಕಿಸಲು ಮನವಿ ಮಾಡಿದರು.
ಮಂಗಳವಾರ ಮತ್ತು ಶುಕ್ರವಾರ ಬಿ. ಶೆಟ್ಟಿಗೇರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ತರಕಾರಿ, ದಿನಸಿ ಹಾಗೂ ಅಗತ್ಯ ವಸ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಆ ದಿನ ಬೆಳಿಗ್ಗೆ ೬ ರಿಂದ ೧೨ ಗಂಟೆಯವರೆಗೆ ಗ್ರಾಮಸ್ಥರು ಅಗತ್ಯ ವಸ್ತು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ. ಸದಸ್ಯರು, ಗ್ರಾಮ ಲೆಕ್ಕಿಗ ಮಹೇಶ್, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಇದ್ದರು.
ಹಚ್ಚ ಹಸಿರಿನ ಸ್ವಚ್ಛ ಪರಿಸರದಲ್ಲಿ ಸ್ವಚ್ಛಂದವಾಗಿದ್ದ ಗ್ರಾಮಸ್ಥರು ಇಂದು ಕೊರೊನಾ ಕರಿನೆರಳಿನಲ್ಲಿದ್ದು, ಧೈರ್ಯ ದೊಂದಿಗೆ ಆತ್ಮವಿಶ್ವಾಸವನ್ನು ಮೈಗೂಡಿಸಿಕೊಂಡು ಕೊರೊನಾ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಗ್ರಾಮಕ್ಕೆ ಬಂದಿರುವ ಕೊರೊನಾ ಮಹಾಮಾರಿಯನ್ನು ಬಡಿದೋಡಿಸುವ ಕಾರ್ಯ ಮಾಡಬೇಕಿದೆ.