ಗೋಣಿಕೊಪ್ಪಲು, ಮೇ ೫: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಕೋವಿಡ್ - ೧೯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯತಿ ಹಲವು ಕ್ರಮಗಳನ್ನು ಕೈಗೊಂಡಿದೆ.
ವಾರದ ಎರಡು ದಿನಗಳಲ್ಲಿ ಮಾರುಕಟ್ಟೆ, ಬಸ್ ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ತರಕಾರಿ ವ್ಯಾಪಾರವನ್ನು ಸಮೀಪದ ಕಾರು ನಿಲ್ದಾಣ ಹಾಗೂ ವ್ಯಾನ್ ನಿಲ್ದಾಣಕ್ಕೆ ಸಂಪೂರ್ಣವಾಗಿ ಸ್ಥಳಾಂತರ ಮಾಡಲಾಗಿದೆ.
ನಿಗದಿತ ದಿನಗಳಲ್ಲಿ ಬೆಳಿಗ್ಗೆ ೬ ರಿಂದ ೧೨ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.