ಸೋಮವಾರಪೇಟೆ, ಮೇ. ೫: ಜಿಲ್ಲೆಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಹಾಗೂ ಜಿಲ್ಲಾಡಳಿತ ಬಿಗಿ ನಿಯಮಗಳನ್ನು ಜಾರಿಗೆ ತರುತ್ತಿದೆ. ಆದಾಗ್ಯೂ ಅನಗತ್ಯವಾಗಿ ಹಲವಷ್ಟು ವಾಹನಗಳ ಓಡಾಟ ಕಂಡುಬರುತ್ತಿದ್ದು, ಇವುಗಳಿಗೆ ಬ್ರೇಕ್ ಹಾಕಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಕೊಡಗಿನ ಮಟ್ಟಿಗೆ ಹೆಚ್ಚಿನ ಬಿಗಿ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ವಾರದಲ್ಲಿ ಕೇವಲ ೨ ದಿನಗಳು ಮಾತ್ರ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ಕಲ್ಪಿಸಿದೆ. ಕಾರ್ಮಿಕರು ಹಾಗೂ ಕಾಮಗಾರಿ ಕೆಲಸ ಸಂಬAಧ ಬಳಕೆಯಾಗುತ್ತಿರುವ ವಾಹನಗಳು ಬೆಳಿಗ್ಗೆ ೮ ಗಂಟೆಯೊಳಗೆ ತೆರಳಿ ಸಂಜೆ ೫ ಗಂಟೆಯ ನಂತರ ವಾಪಸ್ ಆಗಬೇಕು. ಆದರೂ ಕೆಲವೊಂದು ವಾಹನಗಳ ಹಗಲು ವೇಳೆಯಲ್ಲಿ ಸಂಚರಿಸುತ್ತಿದ್ದು, ಇವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಂಜನ್ ಸೂಚಿಸಿದರು.
ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್ ಅವರೊಂದಿಗೆ ತಾಲೂಕಿನ ಗಡಿ ಭಾಗಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಳವಡಿಸಲಾಗಿರುವ ಚೆಕ್ಪೋಸ್ಟ್ಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಶಾಸಕರು, ಕಟ್ಟುನಿಟ್ಟಿನ ಕ್ರಮಕ್ಕೆ ಸಲಹೆ ನೀಡಿದರು.
ಜಿಲ್ಲೆಯ ಗಡಿಭಾಗಗಳಾದ ಹಿಪ್ಲಿಗೇಟ್, ಬೆಸೂರು ಗೇಟ್, ಕೊಡ್ಲಿಪೇಟೆ, ಬಾಣಾವರ, ಶಿರಂಗಾಲ, ಕೊಪ್ಪ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ, ಇಲಾಖೆಯಿಂದ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಕೊರೊನಾ ವಾರಿಯರ್ಸ್ಗೆ ಆತ್ಮಸ್ಥೆöÊರ್ಯ: ಈ ನಡುವೆ ಕೊರೊನಾ ವೈರಸ್ನ ಆತಂಕದ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕಿನ ವಿವಿಧ ಆರೋಗ್ಯ ಇಲಾಖೆ ಸೇರಿದಂತೆ ಇತರ ಇಲಾಖಾ ಸಿಬ್ಬಂದಿಗಳನ್ನು ಭೇಟಿ ಮಾಡಿದ ಶಾಸಕರು, ಅವರುಗಳಿಗೆ ಆತ್ಮಸ್ಥೆöÊರ್ಯ ತುಂಬಿದರು.
ಗೌಡಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ, ಆಲೂರುಸಿದ್ದಾಪುರ, ಶಿರಂಗಾಲ ಸೇರಿದಂತೆ ಇತರ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಶಾಸಕರು, ಕರ್ತವ್ಯನಿರತ ವೈದ್ಯರು, ಶುಶ್ರೂಷಕಿಯರು, ಸಿಬ್ಬಂದಿಗಳೊAದಿಗೆ ಮಾತುಕತೆ ನಡೆಸಿದರು.
ಸಿಬ್ಬಂದಿಗಳ ಯೋಗಕ್ಷೇಮ ವಿಚಾರಿಸಿದ ರಂಜನ್, ಆಸ್ಪತ್ರೆಯಲ್ಲಿರುವ ಸೌಲಭ್ಯ, ಕುಂದುಕೊರತೆಗಳು, ಕೊರೊನಾ ಸೋಂಕಿತರ ಅಂಕಿಅAಶ, ಈವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭ ಮಾತನಾಡಿದ ರಂಜನ್, ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಕೊರೊನಾ ವಾರಿಯರ್ಸ್ಗಳ ಸೇವೆ ಮಹತ್ತರವಾದುದು. ಕೋವಿಡ್ ನಿಗ್ರಹ ಹಾಗೂ ಸೋಂಕಿತರ ಶುಶ್ರೂಷೆಯಲ್ಲಿ ತೊಡಗಿಕೊಂಡಿರುವ ಆರೋಗ್ಯ ಇಲಾಖಾ ಸಿಬ್ಬಂದಿಗಳ ಕಾರ್ಯವನ್ನು ಮರೆಯಲಾಗದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ, ಇಂತಹ ವಾರಿಯರ್ಸ್ಗಳೇ ಸೋಂಕಿಗೆ ಒಳಗಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಎಂತಹ ಸಂದರ್ಭದಲ್ಲೂ ಧೈರ್ಯಗೆಡದೆ ಕರ್ತವ್ಯ ನಿರ್ವಹಿಸುವ ಕೊರೊನಾ ವಾರಿಯರ್ಸ್ಗಳ ರಕ್ಷಣೆಯ ಜವಾಬ್ದಾರಿ ಸರ್ಕಾರದ್ದಾಗಿದೆ. ನೀವುಗಳು ಎದೆಗುಂದದೇ ಕರ್ತವ್ಯ ನಿರ್ವಹಿಸಿ. ಸರ್ಕಾರದಿಂದ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲು ನಾವುಗಳು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಸುಂಟಿಕೊಪ್ಪ: ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ನೀಡಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.
ಸುಂಟಿಕೊಪ್ಪ ಪ್ರಾಥಮಿಕ ವೈದ್ಯಾಧಿಕಾರಿಗಳಾದ ಡಾ.ಜೀವನ್, ಡಾ.ನಿಸರ್ಗ ಅವರು ಶಾಸಕರೊಂದಿಗೆ ಮಾತನಾಡಿ ಆಸ್ಪತ್ರೆಯ ಆ್ಯಂಬ್ಯುಲೆನ್ಸ್ ವಾಹನವು ರಿಪೇರಿಗೆ ತೆರಳಿ ೩ ತಿಂಗಳು ಕಳೆದಿದ್ದು ರೋಗಿಗಳನ್ನು ಸ್ಥಳಾಂತರಿಸಲು ಕಷ್ಟವಾಗುತ್ತಿದೆ. ಶುಶ್ರೂಷಕಿಯರ ಕೊರತೆ ಇದ್ದು ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಮನವಿ ಮಾಡಿದರು.
ಸದ್ಯಕ್ಕೆ ತಾತ್ಕಾಲಿಕವಾಗಿ ಬದಲಿ ವಾಹನವನ್ನು ಬಳಸಲು ಜಿಲ್ಲಾ ಆರೋಗ್ಯ ಅಧಿಕಾರಿಗೆ ಸೂಚಿಸುತ್ತೇನೆ. ಶುಶ್ರೂಷಕಿಯರ ಕೊರತೆ ಎಲ್ಲೆಡೆಯಿದ್ದು, ಮುಂದಿನ ವೈದ್ಯಾಧಿಕಾರಿಗಳ ಸಭೆಯಲ್ಲಿ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಪ್ರಯತ್ನಿಸುತ್ತೇನೆ ಎಂದು ರಂಜನ್ ಭರವಸೆ ನೀಡಿದರು.