ಸಿದ್ದಾಪುರ, ಮೇ ೫: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರ ಮನೆಮನೆಗೆ ಕೊರೊನಾ ನಿಗ್ರಹ ದಳದಿಂದ ಕರಪತ್ರ ವಿತರಣೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗೀಸ್ ಹಾಗೂ ಪಿ.ಡಿ.ಓ ಅನಿಲ್ ಕುಮಾರ್ ನೇತೃತ್ವದಲ್ಲಿ ಗ್ರಾಮದ ಮನೆಮನೆಗಳಿಗೆ ಕೊರೊನಾ ನಿಗ್ರಹ ದಳ ತಂಡದವರು ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಿದರು. ಈ ಬಗ್ಗೆ ಮಾತನಾಡಿದ ಪಿ.ಡಿ.ಓ ಅನಿಲ್ ಕುಮಾರ್ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಹೊರ ಜಿಲ್ಲೆ ರಾಜ್ಯಗಳಿಂದ ಬರುವವರ ಮಾಹಿತಿ ಸಂಗ್ರಹಿಸಲಾಗುತ್ತದೆ ಅಲ್ಲದೇ ಸರ್ಕಾರದ ಮಾರ್ಗಸೂಚಿ ಪಾಲಿಸ ದವರ ವಿರುದ್ಧ ಕ್ರಮ ಕೈಗೊಳ್ಳಲಾಗು ವುದೆಂದರು.