ಮಡಿಕೇರಿ, ಮೇ ೫ : ಕೋವಿಡ್ ಮಹಾಮಾರಿ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಂತೆ ವಾರದಲ್ಲಿ ಐದು ದಿನಗಳ ಕಾಲ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರಲಿದ್ದು, ಅದರಂತೆ ಇಂದು ಜಿಲ್ಲೆಯಾದ್ಯಂತ ಯಾವದೇ ವಹಿವಾಟು, ಜನ ಸಂಚಾರವಿಲ್ಲದೆ ಎಲ್ಲೆಲ್ಲೂ ಮೌನ ಅವರಿಸಿತ್ತು. ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದುದರಿಂದ ತುರ್ತು ಕಾರ್ಯಗಳಿಗೆ ತೆರಳುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅನಾವಶ್ಯಕವಾಗಿ ರಸ್ತೆಗಿಳಿದವರನ್ನು ವಿಚಾರಿಸಿ ಬಂದ ದಾರಿಯಲ್ಲೇ ಹಿಂತಿರುಗಿ ಕಳುಹಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.