ಮುಳ್ಳೂರು, ಮೇ ೫: ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾ.ಪಂ. ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸಭೆ ಗ್ರಾ.ಪಂ.ಅಧ್ಯಕ್ಷೆ ವಿನೋದ ಆನಂದ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಕಚೇರಿ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವುದು, ಕೋವಿಡ್ ಸೋಂಕಿತರ ಮನೆಗಳನ್ನು ಸೀಲ್ಡೌನ್ ಮಾಡಿ ಆರೋಗ್ಯ ಇಲಾಖೆ ಮತ್ತು ಸರಕಾರದ ನಿರ್ದೇಶನ ಪಾಲಿಸುವಂತೆ ಸೂಚಿಸುವುದು, ಹೊರ ಗ್ರಾಮ ಸೇರಿದಂತೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬಂದವರ ಮಾಹಿತಿ ಪಡೆಯುವುದು ಕಾರ್ಯಪಡೆ ಸಮಿತಿಯ ಜವಾಬ್ದಾರಿಯಾಗಿರುತ್ತದೆ ಎಂದು ಗ್ರಾ.ಪಂ.ಪಿಡಿಒ ಹರೀಶ್ ಮಾಹಿತಿ ನೀಡಿದರು.
ಸಭೆಯಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಸೀಲ್ಡೌನ್ ಮಾಡಿ ಅವರು ಹೊರ ಬರಲಾಗದೆ ದಿನನಿತ್ಯ ಬಳಕೆಯ ವಸ್ತು, ಸಾಮಗ್ರಿಗಳು ಸಿಗದೆ ಅನಾನುಕೂಲವಾಗುವ ಸಂದರ್ಭದಲ್ಲಿ ಅವರು ಸಂಬAಧ ಪಟ್ಟ ಗ್ರಾ.ಪಂ. ಅನ್ನು ದೂಷಿಸುತ್ತಿರುವುದರಿಂದ ಅಂತವರಿಗೆ ಅಗತ್ಯ ವಸ್ತುಗಳನ್ನು ನೀಡುವ ವ್ಯವಸ್ಥೆಗಾಗಿ ಜಿಲ್ಲಾಡಳಿತ ನೆರವು ನೀಡದ ಬಗ್ಗೆ ಗ್ರಾ.ಪಂ. ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾ.ಪಂ.ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ಮೆಡಿಕಲ್ ಕಿಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಆರೋಗ್ಯ ಇಲಾಖೆಯಿಂದ ಒದಗಿಸಿಕೊಡದಿರುವ ಹಿನ್ನೆಲೆಯಲ್ಲಿ ಗ್ರಾ.ಪಂ.ವತಿಯಿAದ ಮೆಡಿಕಲ್ ಕಿಟ್ ನೀಡುವಂತೆ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಗ್ರಾ.ಪಂ. ಉಪಾಧ್ಯಕ್ಷೆ ಪಾವನಾ ಗಗನ್, ಸದಸ್ಯರುಗಳು, ಕಚೇರಿ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಯರು ಸಭೆಯಲ್ಲಿ ಹಾಜರಿದ್ದರು.