ಮಡಿಕೇರಿ, ಮೇ ೫: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ೮ ಗಂಟೆ ವೇಳೆಗೆ ೬೮೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೬೫೧ ಆರ್.ಟಿ.ಪಿ.ಸಿ.ಆರ್ ಮತ್ತು ೩೦ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೩೧೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೨೯೯ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೧೪ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೧೮೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೭೧ ಆರ್.ಟಿ.ಪಿ.ಸಿ.ಆರ್ ಮತ್ತು ೧೦ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನಲ್ಲಿ ೧೮೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೮೧ ಆರ್.ಟಿ.ಪಿ.ಸಿ.ಆರ್ ಮತ್ತು ೬ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೩,೮೧೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೯೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೯೦೧೭ ಮಂದಿ ಗುಣಮುಖರಾಗಿದ್ದಾರೆ. ೪೬೫೧ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೨ ಮಂದಿ ಮೃತಪಟ್ಟಿದ್ದು, ಒಟ್ಟು ೧೪೫ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೮೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.