ಮಡಿಕೇರಿ, ಮೇ ೬ : ಕೋವಿಡ್ ೧೯ ಹೆಚ್ಚಳ ಹಿನ್ನೆಲೆ ಮಡಿಕೇರಿ ಸಂತೆಯನ್ನು ಈಗಾಗಲೇ ರದ್ದು ಮಾಡಿರುವುದರಿಂದ ಸದ್ಯ ತಾತ್ಕಾಲಿಕವಾಗಿ ಜಿಲ್ಲಾಧಿಕಾರಿ ಅವರ ಆದೇಶದಂತೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ೪೦ ಮಂದಿ ಮತ್ತು ಎಪಿಎಂಸಿ ಆವರಣದಲ್ಲಿ ೨೦ ಮಂದಿ ತರಕಾರಿ ಮಾರಾಟಕ್ಕೆ ಅವಕಾಶ ಮಾಡಲಾಗಿದೆ ಎಂದು ಪೌರಾಯುಕ್ತ ಎಸ್.ವಿ. ರಾಮದಾಸ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಆದೇಶದಂತೆ ತರಕಾರಿ ಮಾರಾಟ ಮಾಡಲು ಎರಡು ಕಡೆ ಸ್ಥಳ ನಿಗದಿ ಮಾಡಲಾಗಿದೆ. ಉಳಿದಂತೆ ತರಕಾರಿ ಅಂಗಡಿಯವರು ತಮ್ಮ ಅಂಗಡಿಯಲ್ಲಿಯೇ ತರಕಾರಿ ಮಾರಾಟ ಮಾಡಬಹುದಾಗಿದೆ. ಆದರೆ ಬೀದಿ ಬದಿ ತರಕಾರಿ ಮಾರಾಟ ಮಾಡುವಂತಿಲ್ಲ ಎಂದು ಪೌರಾಯುಕ್ತರು ಕೋರಿದ್ದಾರೆ.

ಈ ಸಂಬAಧ ನಗರಸಭೆ ಪೌರಾಯುಕ್ತ ರಾಮದಾಸ್, ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಂತಿಮ ಹಾಗೂ ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಕೋವಿಡ್ ಮಾರ್ಗಸೂಚಿ ಪಾಲಿಸುವಲ್ಲಿ ತರಕಾರಿ ಕೊಳ್ಳಲು ಗುರುತು ಮಾಡಲಾಯಿತು.