ಮಡಿಕೇರಿ, ಮೇ ೬ : ಕೊಡಗು ಜಿಲ್ಲಾ ವ್ಯಾಪ್ತಿಯ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ಗಳಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆ ತಾ. ೯ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ಅಶೋಕ್ ಅವರು ತಿಳಿಸಿದ್ದಾರೆ. ಐಗೂರು, ಗೋಣಿಮರೂರು ಫೀಡರ್ಗಳ ವ್ಯಾಪ್ತಿಯ ಯಡವಾರೆ, ಕಾಜೂರು, ಗರಗಂದೂರು, ಗಣಗೂರು, ಬಾಣಾವಾರ, ಸಂಗಯ್ಯನಪುರ, ನಾಗವಾಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಕೋರಿದ್ದಾರೆ.