ಮಡಿಕೇರಿ, ಮೇ ೬ : ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಪ್ರತಿನಿತ್ಯ ವರದಿಯಾಗುತ್ತಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಈ ರೀತಿಯಾಗಿ ಸೋಂಕಿತರ ಶುಶ್ರೂಷೆಗೆ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ, ಕೋವಿಡ್ ಕೇರ್ ಸೆಂಟರ್ ಮತ್ತು ಹೋಂ ಐಸೋಲೇಶನ್ ಎಂಬ ಅರೈಕೆ ಕ್ರಮಗಳಿವೆ.
ಜಿಲ್ಲೆಯಲ್ಲಿ ಸೋಂಕಿತರಿಗೆ ಮಾಹಿತಿ ಕೊರತೆಯಿಂದಾಗಿ ಎಲ್ಲಾ ಸೋಂಕಿತರು ಮಡಿಕೇರಿಯ ನಿಗಧಿತ ಕೋವಿಡ್ ಆಸ್ಪತ್ರೆಯ ಟ್ರಯೇಜ್ ಏರಿಯಾಕ್ಕೆ ನೇರವಾಗಿ ಆಗಮಿಸುತ್ತಿರುವುದರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ದಟ್ಟಣೆಯ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಆಯಾಯ ತಾಲೂಕುಗಳಲ್ಲಿ ವರದಿಯಾಗುವ ಸೋಂಕಿತರನ್ನು ಆಯಾಯ ತಾಲೂಕುಗಳಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್ಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೋರಿದ್ದಾರೆ.
ಕೋವಿಡ್ ಕೇರ್ ಸೆಂಟರ್ಗಳಿಗೆ ಆಗಮಿಸಿದ ಸೋಂಕಿತರನ್ನು ತಾಲೂಕು ಕೋವಿಡ್ ಆಸ್ಪತ್ರೆಗಳಲ್ಲಿಯೇ ಪರೀಕ್ಷಿಸಿ ಅವರುಗಳು ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ, ಕೋವಿಡ್ ಕೇರ್ ಸೆಂಟರ್ ಅಥವಾ ಹೋಂ ಐಸೋಲೇಶನ್ಲ್ಲಿ ಇರಬೇಕು ಎಂಬ ಬಗ್ಗೆ ಖಚಿತಪಡಿಸಿಕೊಂಡು ಅದರಂತೆ ಆಂಬ್ಯುಲೆನ್ಸ್ ಮೂಲಕ ಕಳುಹಿಸಿಕೊಡಲಾಗುವುದು. ಆ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಕೋರಿದ್ದಾರೆ.