ಸೋಮವಾರಪೇಟೆ,ಮೇ.೬: ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ೨೦೦ ಬೆಡ್ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದು, ಸಧÀ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸಂಬAಧಿತ ಚಿಕಿತ್ಸೆಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದರು.
ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಹಾಗೂ ಸಿಬ್ಬಂದಿಗಳಿAದ ಮಾಹಿತಿ ಪಡೆದ ಉಸ್ತುವಾರಿ ಸಚಿವರು, ಕೊರೊನಾ ಸಂಬAಧಿತ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ, ಆಸ್ಪತ್ರೆಗೆ ಅಗತ್ಯವಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿಗಳನ್ನು ಮುಂದಿನ ೧ ವಾರದೊಳಗೆ ನೇಮಿಸಿ ಕೊಳ್ಳಲಾಗುವುದು. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಿಗೆ ವೈದ್ಯರುಗಳ ನೇಮಕಕ್ಕೆ ಆಯಾ ಜಿಲ್ಲಾಧಿಕಾರಿಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಇಂದಿನಿAದಲೇ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಒಂದು ವಾರದೊಳಗೆ ಆಸ್ಪತ್ರೆಗೆ ವೈದ್ಯರು, ಶುಶ್ರೂಷಕಿಯರು, ಇತರ ಸಿಬ್ಬಂದಿಗಳ ನೇಮಕಾತಿ ನಡೆಯಲಿದೆ ಎಂದು ಸಚಿವರು ಭರವಸೆಯಿತ್ತರು.
ಗುಡ್ಡಗಾಡು ಪ್ರದೇಶವಾಗಿರುವ ಸೋಮವಾರಪೇಟೆಗೆ ದೂರ ದೂರುಗಳಿಂದ ರೋಗಿಗಳು ಆಗಮಿಸಬೇಕಿದ್ದು, ಸದ್ಯಕ್ಕೆ ಎರಡು ಆ್ಯಂಬ್ಯುಲೆನ್ಸ್ ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಮಡಿಕೇರಿಗೆ ಆಂಬ್ಯುಲೆನ್ಸ್ಗಳು ತೆರಳಿದರೆ ರೋಗಿಗಳು ಭಾರೀ ಸಮಸ್ಯೆ ಎದುರಿಸಬೇಕಿದ್ದು, ಆ್ಯಂಬ್ಯುಲೆನ್ಸ್ಗಳ ಕೊರತೆಯಿದೆ ಎಂದು ಮಾಧ್ಯಮದವರು ಸಚಿವರ ಗಮನ ಸೆಳೆದರು.
ಇದಕ್ಕೆ ಸ್ಪಂದಿಸಿದ ಸಚಿವ ಸೋಮಣ್ಣ, ತಕ್ಷಣಕ್ಕೆ ಸೋಮವಾರ ಪೇಟೆ ಸರ್ಕಾರಿ ಆಸ್ಪತ್ರೆಗೆ ಹೆಚ್ಚುವರಿಯಾಗಿ ೨ ಆ್ಯಂಬ್ಯುಲೆನ್ಸ್ ಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಸೂಚಿಸಿದರು. ಇದರೊಂದಿಗೆ ಖಾಸಗಿಯಾಗಿ ಆ್ಯಂಬ್ಯುಲೆನ್ಸ್ಗಳ ಸೇವೆ ನೀಡಿದರೆ ಸರ್ಕಾರದಿಂದಲೇ ಬಾಡಿಗೆ ನೀಡಲಾಗುವುದು ಎಂದರು.
ಪ್ರಸ್ತುತ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಹೆಲ್ತ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ೫೦ ಬೆಡ್ಗಳನ್ನು ಅಳವಡಿಸಲಾಗಿದೆ. ಇದನ್ನು ೧೦೦ಕ್ಕೆ ಹೆಚ್ಚಿಸಲು ತಕ್ಷಣ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.
ಸರ್ಕಾರಿ ಆಸ್ಪತ್ರೆ ಆವರಣವನ್ನು ಪರಿಶೀಲಿಸಿದ ಸಚಿವರು, ಹಳೆಯ ಕಟ್ಟಡಗಳನ್ನು ವೀಕ್ಷಿಸಿ, ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸ್ಥಳಾವಕಾಶ ವಿದ್ದು, ೨೦೦ ಬೆಡ್ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಿ, ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಅನುದಾನ ಒದಗಿಸುತ್ತೇನೆ ಎಂದು ಶಾಸಕ ಅಪ್ಪಚ್ಚುರಂಜನ್ ಅವರಿಗೆ ತಿಳಿಸಿದರು.
ಈ ಸಂದರ್ಭ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಕರ್ನಾಟಕ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ತಹಶೀಲ್ದಾರ್ ಗೋವಿಂದರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ, ಆಸ್ಪತ್ರೆಯ ವೈದ್ಯ ಶಿವಪ್ರಸಾದ್, ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.