ಮಡಿಕೇರಿ, ಮೇ ೬ : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೮ ಗಂಟೆ ವೇಳೆಗೆ ೬೬೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೬೩೪ ಆರ್.ಟಿ.ಪಿ.ಸಿ.ಆರ್ ಮತ್ತು ೩೫ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨೨೫, ಸೋಮವಾರಪೇಟೆ ತಾಲೂಕಿನಲ್ಲಿ ೨೫೫, ವೀರಾಜಪೇಟೆ ತಾಲೂಕಿನಲ್ಲಿ ೧೮೯ ಕಂಡುಬAದಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೪,೪೮೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨೩೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೯೨೫೩ ಮಂದಿ ಗುಣಮುಖರಾಗಿದ್ದಾರೆ. ೫೦೭೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೭ ಮಂದಿ ಮೃತಪಟ್ಟಿದ್ದು, ಒಟ್ಟು ೧೫೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೪೬೬ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.