ಮಡಿಕೇರಿ, ಮೇ ೬: ಹೃದಯಾಘಾತದಿಂದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಿಧನ ಹೊಂದಿದ ಘಟನೆ ನಗರದಲ್ಲಿ ನಡೆದಿದೆ.
ಮೂಲತಃ ವೀರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ರಾಮಚಂದ್ರ ಸಾವನ್ನಪ್ಪಿದ ವ್ಯಕ್ತಿ. ಮೃತ ವ್ಯಕ್ತಿ ಕಳೆದ ೩ ತಿಂಗಳಿನಿAದ ನಗರದ ಸ್ವರ್ಣ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ತಾ. ೬ ರ ಬೆಳಗ್ಗೆ ಬೇಕರಿಗೆ ಸೇರಿದ ಜಾಗದಲ್ಲಿ ವ್ಯಕ್ತಿ ಕುಸಿದು ಬಿದ್ದಿದ್ದು, ಅಲ್ಲಿಂದ ಸಹದ್ಯೋಗಿಗಳು ಆತನನ್ನು ಆಸ್ಪತ್ರೆಗೆ ಕರೆದುಕೊಂಡಲು ಹೋಗಲು ಮೆಟ್ಟಿಲು ಇಳಿಸುವಾಗ ರಾಮಚಂದ್ರ ಕೊನೆಯುಸಿರೆಳೆದಿದ್ದಾನೆ. ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕಾರ್ಯಕರ್ತರಿಗೆ ಘಟನೆ ಗಮನಕ್ಕೆ ಬಂದ ತಕ್ಷಣ ವಿಷಯವನ್ನು ಪೊಲೀಸರಿಗೆ ತಿಳಿಸಿ, ಮೃತದೇಹವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲು ಸಹಾಯ ಮಾಡಿದ್ದಾರೆ. ಕೋವಿಡ್ ಪರೀಕ್ಷೆ ನಡೆಸಿ ನೆಗೆÀಟಿವ್ ವರದಿ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ ಎಂದು ಮಡಿಕೇರಿ ನಗರ ಪೊಲೀಸರು ತಿಳಿಸಿದ್ದಾರೆ.