ಮಾನ್ಯರೆ, ಮೇ 2 ರಂದು ಚುನಾವಣಾ ಫಲಿತಾಂಶ ಬಂದ 24 ಗಂಟೆಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಳು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಇದರಲ್ಲಿ ಅನೇಕ ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಪಕ್ಷದ ಅನೇಕ ಕಾರ್ಯಕರ್ತರ ಮನೆ ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯಿಂದ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ನೊಂದಿದ್ದೇವೆ.
ಬಂಗಾಳದಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದು, 70 ಸ್ಥಾನಗಳಿಸಿದೆ. 90 ಕಡೆಗಳಲ್ಲಿ ಸಾವಿರ ಅಂತರದ ಸೋಲು ಕಂಡಿದೆ. ಇದನ್ನು ಸಹಿಸದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಗೂಂಡಾಗಳು ಕ್ರೌರ್ಯ ಮೆರೆದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಹಿಂದೂಗಳ ಮೇಲೆ ದ್ವೇಷದ ಹಲ್ಲೆ ಮಾಡುತ್ತಿದ್ದಾರೆ.
ವಿವಿಧೆಡೆ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ನಡೆಸುವ ಹಿಂಸಾಚಾರದ ವಿರುದ್ಧ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಕಾರ್ಯಕರ್ತರ ಸುರಕ್ಷತೆಗೆ ಮುಂದಾಗಬೇಕಿದೆ.
ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆಗಳು, ಹಿಂಸಾಚಾರ ಘಟನೆಗಳು ನಡೆಯುತ್ತಿದ್ದು, ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ.
- ಪದ್ಮನಾಭ, ಪ್ರಧಾನ ಕಾರ್ಯದರ್ಶಿ, ಸೋಮವಾರಪೇಟೆ ತಾಲೂಕು ಬಿ.ಜೆ.ಪಿ. ಯುವ ಮೋರ್ಚಾ, ಬೆಳ್ಯಪ್ಪ, ಪ್ರಮೋದ್, ಸಚಿನ್, ನೆಲ್ಲಿಹುದಿಕೇರಿ, ಯುವ ಮೋರ್ಚಾ ಪ್ರಮುಖರು.