ಮಡಿಕೇರಿ, ಮೇ ೮: ಸೋಮವಾರಪೇಟೆ ತಾಲೂಕಿನ ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರು ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮದ ಜಾಗದ ಸರ್ವೆ ನಂ ೪೨/೨ರ ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಂದ ವೈಜ್ಞಾನಿಕ ಕಸ ವಿಲೇವಾರಿ ಘಟಕ ನಿರ್ಮಿಸಲು ಅಡಚಣೆಯಾದ ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಕೋರಿದ್ದಾರೆ.

ಶನಿವಾರಸಂತೆ ವಲಯದ ವಲಯ ಅರಣ್ಯಾಧಿಕಾರಿ ಹಾಗೂ ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರು ಸ್ಥಳ ಪರಿಶೀಲಿಸಿ ವೈಜ್ಞಾನಿಕ ಕಸ ವಿಲೇವಾರಿ ಘಟಕ ನಿರ್ಮಿಸಲು ಅಡಚಣೆಯಾದ ೧೦೫ ಅಕೇಶಿಯಾ ಮರಗಳನ್ನು ಕಡಿದು ತೆರವು ಮಾಡಿ ಸರ್ಕಾರಿ ನಾಟಾ ಸಂಗ್ರಹಾಲಯಕ್ಕೆ ಸಾಗಿಸಬೇಕಾಗಿದೆ ಎಂದು ವರದಿ ಸಲ್ಲಿಸಿರುತ್ತಾರೆ.

ಸಾರ್ವಜನಿಕರು ಈ ಬಗ್ಗೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ೧೦ ದಿನದೊಳಗೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಚೇರಿಗೆ ಲಿಖಿತ ಮೂಲಕ ಆಕ್ಷೇಪಣೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.