ಮಡಿಕೇರಿ, ಮೇ 9 : ಮಡಿಕೇರಿ ಸಮೀಪ ಕರ್ಣಂಗೇರಿ ಗ್ರಾಮ ವೊಂದರಲ್ಲೇ ಕೋವಿಡ್ ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾಗಿದ್ದು, ಆತಂಕಕಾರಿ ಬೆಳವಣಿಗೆಯಾಗಿದೆ. ಗ್ರಾಮಸ್ಥರೆಲ್ಲರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ ಮನವಿ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಟ್ಟು 58 ಪ್ರಕರಣಗಳಲ್ಲಿ 4 ಮಂದಿ ಗುಣಮುಖರಾಗಿದ್ದಾರೆ. ಇಂದು 11 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗ್ರಾಮಸ್ಥರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೋರಿದ್ದಾರೆ.