ಸೋಮವಾರಪೇಟೆ, ಮೇ 8: ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಯಿತು.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ಪ್ರದೇಶದಲ್ಲಿ ಶುಚಿತ್ವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸ್ಯಾನಿಟೈಸ್ ಮಾಡಲಾಯಿತು. ಈ ಸಂದರ್ಭ ಗ್ರಾ,ಪಂ. ಅಧ್ಯಕ್ಷೆ ಶೀಲಾ, ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಮನವಿ ಮಾಡಿದರು.