ಮಡಿಕೇರಿ, ಮೇ 9: ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆ ವೇಳೆಗೆ 691 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
667 ಆರ್.ಟಿ.ಪಿ.ಸಿ.ಆರ್ ಮತ್ತು 24 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 284 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 273 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 11 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 198 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 188 ಆರ್.ಟಿ.ಪಿ.ಸಿ.ಆರ್ ಮತ್ತು 10 ಪ್ರಕರಣಗಳು Á್ರ್ಯಪಿಡ್ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನಲ್ಲಿ 209 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 206 ಆರ್.ಟಿ.ಪಿ.ಸಿ.ಆರ್ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 16,432 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 806 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 11,191 ಮಂದಿ ಗುಣಮುಖರಾಗಿದ್ದಾರೆ.
5064 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 5 ಮಂದಿ ಮೃತಪಟ್ಟಿದ್ದು, ಒಟ್ಟು 177 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 470 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.