ವೀರಾಜಪೇಟೆ, ಮೇ 9: ಸಾರ್ವಜನಿಕ ಆಸ್ಪತ್ರೆಯ ಸಮೀಪ ಆಯುರ್ವೇದಿಕ್ ಆಸ್ಪತ್ರೆಯ ಒಂದು ಭಾಗದಲ್ಲಿ ತಾ. 10 ರಿಂದ (ಇಂದಿನಿಂದ) ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿಗಳ ವಿಭಾಗವನ್ನು ತಾತ್ಕಾಲಿಕವಾಗಿ ತೆರೆಯಲು ಸಿದ್ಧತೆ ನಡೆಸಲಾಗಿದೆ. ಹೊರ ರೋಗಿಗಳ ವಿಭಾಗದಲ್ಲಿ ಎಂದಿನಂತೆ ಆಯ್ದ ವೈದ್ಯರುಗಳು ಕಾರ್ಯ ನಿರ್ವಹಿಸಲಿದ್ದಾರೆ.