ಸಿದ್ದಾಪುರ, ಮೇ 9; ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ 15ಕ್ಕೂ ಅಧಿಕ ಮನೆಗಳನ್ನು ಕಂಟೈನ್‍ಮೆಂಟ್ ಝೋನ್ ಎಂದು ಮಾಡಲಾಗಿದೆ ಈ ಮನೆಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮೀರ್ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರುಗಳು ಒಂದು ತಿಂಗಳ ಗೌರವಧನದಲ್ಲಿ ಅಗತ್ಯವಸ್ತುಗಳ ಕಿಟ್‍ಗಳನ್ನು 15ಕ್ಕೂ ಅಧಿಕ ಕುಟುಂಬಗಳಿಗೆ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮೀರ್ ಮುಂದಿನ ದಿನಗಳಲ್ಲಿ ದಾನಿಗಳ ನೆರವಿನಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪತ್ತೆಯಾಗುವ ಪ್ರಕರಣಗಳು ಕುಟುಂಬಗಳಿಗೆ ಅಗತ್ಯವಸ್ತುಗಳ ಕಿಟ್‍ಗಳನ್ನು ವಿತರಣೆ ಮಾಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.