ಮಡಿಕೇರಿ, ಮೇ 10 : ಕೋವಿಡ್ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಏಕರೂಪ ನಿಯಮವನ್ನು ಜಾರಿಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರೆ ಸರಿತಾ ಪೂಣಚ್ಚ ಒತ್ತಾಯಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿಗಳನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದ್ದರೂ ಕೊಡಗು ಜಿಲ್ಲೆಯಲ್ಲಿ 2ದಿನ ಮಾತ್ರ ಅವಕಾಶ ನೀಡಲಾಗಿದೆ. ಇದರಿಂದ ಬಹುತೇಕ ಕಡೆ ಜನರು ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮುಗಿ ಬೀಳುವುದು ಸಾಮಾನ್ಯವಾಗಿದೆ.
ಇತ್ತೀಚೆಗೆ ಜಿಲ್ಲಾಡಳಿತ ಹಲವು ನಿಯಮಗಳನ್ನು ಜಾರಿಗೊಳಿಸಿ ಆದೇಶ ಮಾಡಲಾಗಿತ್ತು . ಇತ್ತೀಚೆಗೆ ಜಿಲ್ಲೆಗೆ ಬಂದ ಉಸ್ತುವಾರಿ ಸಚಿವರಿಗೆ ಕೆಲ ಜನಪ್ರತಿನಿಧಿಗಳು ನಿಯಮ ಬದಲಿಸುವಂತೆ ಒತ್ತಡ ಹೇರಿದ ಪರಿಣಾಮ ಸಚಿವರು ಆದೇಶಕ್ಕೆ ಜಿಲ್ಲಾಡಳಿತ ಗೊಂದಲದ ಹೇಳಿಕೆ ನೀಡಿರುವುದರಿಂದ ಜನರು ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.