ಮಡಿಕೇರಿ, ಮೇ 10: 66 ಕೆವಿ ಪೊನ್ನಂಪೇಟೆ-ವೀರಾಜಪೇಟೆ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸ ಬೇಕಾಗುವುದರಿಂದ ತಾ. 12 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ 66/11 ಕೆವಿ ವೀರಾಜಪೇಟೆ, 33/11 ಕೆವಿ ಸಿದ್ದಾಪುರ ಹಾಗೂ 33/11 ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಈ ಹಿನ್ನಲೆ ವೀರಾಜಪೇಟೆ, ಬಿ. ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು ಹಾಗೂ ಸುತ್ತ ಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ವಾಗಲಿದೆ ಸಾರ್ವಜನಿಕರು ಸಹಕರಿಸು ವಂತೆ ಸೆಸ್ಕ್ ಇಇ ಕೋರಿದ್ದಾರೆ.