ಮಡಿಕೇರಿ, ಮೇ 10: ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆ ವೇಳೆಗೆ 653 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 641 ಆರ್.ಟಿ.ಪಿ.ಸಿ.ಆರ್. ಮತ್ತು 12 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 290, ಸೋಮವಾರಪೇಟೆ ತಾಲೂಕಿನಲ್ಲಿ 207, ವೀರಾಜಪೇಟೆ ತಾಲೂಕಿನಲ್ಲಿ 156 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 17,085 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 626 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 11,817 ಮಂದಿ ಗುಣಮುಖರಾಗಿದ್ದಾರೆ. 5081 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10 ಮಂದಿ ಮೃತಪಟ್ಟಿದ್ದು, ಒಟ್ಟು 187 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ಮೆಂಟ್ ವಲಯಗಳ ಸಂಖ್ಯೆ 488 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.