ಸಿದ್ದಾಪುರ, ಮೇ 10 : ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದೇ ಭಾಗದಲ್ಲಿ 30ಕ್ಕೂ ಅಧಿಕ ಕೊರೊನಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗವನ್ನು ನಿರ್ಬಂಧಿತ ವಲಯ ಎಂದು ಘೋಷಿಸಲಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಮೀರ್, ಪಿಡಿಒ ರಾಜೇಶ್, ಗ್ರಾಮಲೆಕ್ಕಿಗ ಗೌಡಜ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಭೇಟಿ ನೀಡಿ ನಿರ್ಬಂಧಿತ ಪ್ರದೇಶದ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು.