ಮಡಿಕೇರಿ, ಮೇ 10: ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಕಾನೂನಿನ ಅರಿವು ಮತ್ತು ನೆರವು ಹಾಗೂ ಅಗತ್ಯ ಸೇವೆ ಒದಗಿಸುವಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದ್ದಾರೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕೊಡಗು ಜಿಲ್ಲೆಯಲ್ಲಿಯೂ ಸಹಾಯವಾಣಿ ಕೇಂದ್ರ ತಾಲೂಕು ಮಟ್ಟದಲ್ಲಿ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಹಾಯವಾಣಿ (1800-425-90900) ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (08272-222373), ಸೋಮವಾರಪೇಟೆ ನ್ಯಾಯಾಲಯ (08276-282249) ಹಾಗೂ ವೀರಾಜಪೇಟೆ ನ್ಯಾಯಾಲಯ (897094557) ಇಲ್ಲಿ ಸಹಾಯವಾಣಿ ಆರಂಭಿಸಲಾಗಿದ್ದು, ಕೋವಿಡ್-19 ಸಂಬಂಧಿಸಿದಂತೆ ಕಾನೂನು ಅರಿವು-ನೆರವು ಪಡೆಯಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದ್ದಾರೆ.

ಸಹಾಯವಾಣಿ ಕೇಂದ್ರ ಆರಂಭಿಸುವುದರ ಜೊತೆಗೆ ಕೋವಿಡ್-19 ನಿಯಂತ್ರಣ ಸಂಬಂಧ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೆಯೇ ವರ್ಜುವಲ್ ಸಭೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.