ನೀಡಿ : ಜೆಡಿಎಸ್ ಒತ್ತಾಯ

ಮಡಿಕೇರಿ, ಮೇ 10 : ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಜಿಲ್ಲಾಡಳಿತ ಕೊಡಗಿನಲ್ಲಿ ಅಗತ್ಯ ವಸ್ತುಗಳ ಖರೀದಿಗೆ ವಾರದ ಎರಡು ದಿನ ಮಾತ್ರ ಅವಕಾಶ ಕಲ್ಪಿಸಿದೆ. ಆದರೆ ಈ ಕ್ರಮದಿಂದ ಜನಜಂಗುಳಿ ಏರ್ಪಟ್ಟು ವ್ಯತಿರಿಕ್ತ ಪರಿಣಾಮ ಉಂಟಾಗುವುದರಿಂದ ವಾರದ 5 ದಿನ ಖರೀದಿಗೆ ಅನುಮತಿ ನೀಡಬೇಕೆಂದು ಜಾತ್ಯತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನಸಂದಣಿ ತಪ್ಪಿಸಲು ಜಿಲ್ಲಾಡಳಿತ ಮತ್ತೊಮ್ಮೆ ತನ್ನ ಆದೇಶವನ್ನು ಪುನರ್ ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. ಅತಿ ಮುಖ್ಯವಾಗಿದ್ದರೂ ಅಗತ್ಯ ವಸ್ತುಗಳ ಖರೀದಿಗೆ ಎರಡು ದಿನಗಳನ್ನಷ್ಟೇ ಮೀಸಲಿಟ್ಟಿರುವುದರಿಂದ ನೂಗು ನುಗ್ಗಲು ಉಂಟಾಗುತ್ತಿದೆ. ಅಲ್ಲದೆ ವಾಹನದಟ್ಟಣೆ ಹೆಚ್ಚಾಗಿ ಪೊಲೀಸರಿಗೂ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಆದ್ದರಿಂದ ಪ್ರತಿವಾರ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಖರೀದಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.