ಮಡಿಕೇರಿ, ಮೇ 10: ಜಿಲ್ಲೆಯಲ್ಲಿ ವಾಸಿಸುತ್ತಿರುವ ವಿಶೇಷ ಚೇತನ ವ್ಯಕ್ತಿಗಳ ಮಾಹಿತಿಯನ್ನು ಪಡೆಯಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರು ಜಿಲ್ಲೆಯಲ್ಲಿ ನೇಮಿಸಿರುವ ಪ್ರತಿ ಗ್ರಾ.ಪಂ.ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ತಾಲೂಕು ಪಂಚಾಯಿತಿ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ವಿಕಲಚೇತನರಿಗೆ ಆದ್ಯತೆ ಮೇಲೆ ಕೋವಿಡ್ ಲಸಿಕೆ ನೀಡಲು ಶ್ರಮಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜೇಶ (8073192914), ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹರೀಶ್ ಟಿ.ಆರ್ (9008685129) ಹಾಗೂ ವೀರಾಜಪೇಟೆ ತಾಲೂಕು ಪಂಚಾಯಿತಿ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಥನ್ ಸಿ.ಬಿ (9900883654) ಇವರಿಂದ ಮಾಹಿತಿ ಪಡೆದು ತುರ್ತಾಗಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಎಲ್ಲಾ ತಹಶೀಲ್ದಾರರು, ಎಲ್ಲಾ ತಾ.ಪಂ. ಇಒಗಳು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ.