ಪೆÇನ್ನಂಪೇಟೆ, ಮೇ 10 : ಜಿಲ್ಲಾಡಳಿತ ಇದೀಗ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳಿಂದ ಜಿಲ್ಲೆಗೆ ಅಪಾಯ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ. ಆದ್ದರಿಂದ ಮಾರ್ಗಸೂಚಿಯನ್ನು ಮತ್ತೊಮ್ಮೆ ಪುನರ್ ಪರಿಶೀಲಿಸಿ ಜನರ ಹಿತದೃಷ್ಟಿಯಿಂದ ವೈಜ್ಞಾನಿಕವಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರಾದ ಮೂಕೊಂಡ ವಿಜು ಸುಬ್ರಮಣಿ ಅವರು ಹೇಳಿದ್ದಾರೆ.