ಮಡಿಕೇರಿ, ಮೇ ೧೬: ಕೇರಳದಲ್ಲಿ ಕಂಡುಬAದಿರುವ ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕಳೆದೆರಡು ದಿನಗಳಿಂದ ಮಳೆಯ ವಾತಾವರಣ ಸೃಷ್ಟಿಯಾಗಿತ್ತು. ಶನಿವಾರ ಬೆಳಿಗ್ಗೆಯಿಂದಲೇ ನಿರಂತರ ಮಳೆ ಸುರಿದು ಸಂಜೆ ಬಳಿಕ ಕೆಲವೆಡೆಗಳಲ್ಲಿ ಹೆಚ್ಚಿನ ಮಳೆಯಾಗಿ ಮನೆ, ರಸ್ತೆ, ಸೇತುವೆಗಳಿಗೆ ಹಾನಿಯುಂಟಾಗಿದೆ. ನದಿ - ತೊರೆಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆದರೆ, ಭಾನುವಾರ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಆಗಾಗ್ಗೆ ಬಿಸಿಲಿನ ವಾತಾವರಣ ಕಂಡುಬAದಿತು.

ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಎಲ್ಲೆಡೆ ಭಾನುವಾರದಂದು ಮಳೆಯ ಪ್ರಮಾಣ ಇಳಿಮುಖಗೊಂಡಿತ್ತು. ಅತಿ ಹೆಚ್ಚು ಮಳೆ ಬೀಳುವ ಪ್ರದೇಶವಾದ ಭಾಗಮಂಡಲದಲ್ಲ್ಲೂ ಮಳೆಯ ಪ್ರಮಾಣ ಕಡಿಮೆಯಿತ್ತಾದರೂ ಶನಿವಾರ ಸುರಿದ ಮಳೆಗೆ ಸಂಗಮದಲ್ಲಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿತ್ತು.