ಮಡಿಕೇರಿ, ಮೇ ೧೬: ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ೮ ಗಂಟೆ ವೇಳೆಗೆ ೩೭೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೩೫೩ ಆರ್.ಟಿ.ಪಿ.ಸಿ.ಆರ್ ಮತ್ತು ೨೪ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೧೧೮, ಸೋಮವಾರಪೇಟೆ ತಾಲೂಕಿನಲ್ಲಿ ೧೧೯, ವೀರಾಜಪೇಟೆ ತಾಲೂಕಿನಲ್ಲಿ ೧೪೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳಸಂಖ್ಯೆ ೨೦,೧೩೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮೧೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೧೫,೫೪೪ ಮಂದಿ ಗುಣಮುಖರಾಗಿದ್ದಾರೆ. ೪೩೫೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮ ಸಾವು ಉಂಟಾಗಿದ್ದು, ಒಟ್ಟು ೨೩೩ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೪೮೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.