ಆಕ್ಸಿಜನ್ ಹಂಚಿಕೆ ಪ್ರಮಾಣ ಹೆಚ್ಚಳ ವೈದ್ಯಕೀಯ ಸಿಬ್ಬಂದಿ ನಿಯೋಜನೆಗೆ ಕ್ರಮ
ಮಡಿಕೇರಿ, ಮೇ ೧೭: ಕೊಡಗು ಜಿಲ್ಲೆಗೆ ಅಗತ್ಯವಿರುವ ವೈದ್ಯಕೀಯ ಸವಲತ್ತನ್ನು ಸರಕಾರ ನೀಡಿದೆ; ಮುಂದೆಯೂ ಬೇಕಾದ ಸೌಲಭ್ಯ ದೊರಕುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಮೆಡಿಕಲ್ ಕಾಲೇಜು) ೧೦೦ ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕೋವಿಡ್ ಕೇರ್ ಸೆಂಟರ್ ಅನ್ನು ಉದ್ಘಾಟಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೂ ೧.೦೬ ಕೋಟಿ ವೆಚ್ಚದಲ್ಲಿ ವೈರಾಣು ಟೆಸ್ಟಿಂಗ್ ಲ್ಯಾಬ್ ಸ್ಥಾಪಿಸಲಾಗಿದೆ. ನಿತ್ಯ ೧೮೦೦ ಕ್ಕಿಂತ ಹೆಚ್ಚು ಆರ್.ಟಿ.ಪಿ.ಸಿ.ಆರ್. ಮತ್ತು ಆಂಟಿಜನ್ ಪರೀಕ್ಷೆ ಮಾಡಲಾಗುತ್ತಿದೆ. ಪರೀಕ್ಷೆ ನಡೆಸುವ ಸಲುವಾಗಿ ಜಿಲ್ಲೆಯಲ್ಲಿ ೯ ಸಂಚಾರಿ ತಂಡ ರಚಿಸಿದ್ದು, ಜಿಲ್ಲಾಸ್ಪತ್ರೆಯಲ್ಲಿ ೨೦೦ ಆಕ್ಸಿಜನೇಟೆಡ್ ಬೆಡ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸುಸಜ್ಜಿತವಾದ ೫೬ ಐ.ಸಿ.ಯು ಬೆಡ್ ಮತ್ತು ೪೩ ವೆಂಟಿಲೇಟರ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ೩೨ ಅಂಬ್ಯುಲೆನ್ಸ್ ವಾಹನಗಳಿದ್ದು, ಸ್ವಾö್ಯಬ್ ಸಂಗ್ರಹಣೆಗಾಗಿ ೫ ಹಾಗೂ ಶವ ಸಾಗಾಣಿಕೆಗೆ ೪ ವಾಹನವನ್ನು ಮೀಸಲಿಡಲಾಗಿದೆ. ಅಲ್ಲದೆ ಗಂಭೀರ ಸ್ವರೂಪದ ಸೋಂಕಿತರ ಸೇವೆಗಾಗಿ ಹೈಟೆಕ್ ಮಾದರಿಯ ಆಂಬ್ಯುಲೆನ್ಸ್ ವಾಹನಗಳನ್ನು ಸಜ್ಜುಗೊಳಿಸಲು ಕ್ರಮವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಒಟ್ಟಾರೆಯಾಗಿ ೪೧೦ ಬೆಡ್ಗಳಿವೆ. ಐ.ಸಿ.ಯು ಘಟಕದಲ್ಲಿ ನವಜಾತ ಶಿಶುಗಳಿಗೆ ಹಾಗೂ ನಾನ್ಕೋವಿಡ್ ರೋಗಿಗಳ ಡಯಾಲಿಸಿಸ್ಗೆ ಪ್ರತ್ಯೇಕವಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಸರಕಾರ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ ೫೦ ಆಕ್ಸಿಜನ್ ಸಿಲಿಂಡರ್, ೩೦ ಆಕ್ಸಿಜನ್ ಕಾನ್ಸಟ್ರೇರ್ಸ್, ೧೦ ವೆಂಟಿಲೇಟರ್, ೧೫೦೦ ಆಕ್ಸಿಮೀಟರ್ ಹಾಗೂ ೫೨೦ ರೆಮಿಡಿಸಿವಿರ್ ಇಂಜೆಕ್ಷನ್ ಹಾಗೂ ಅಗತ್ಯ ಔಷಧಿಗಳನ್ನು ಜಿಲ್ಲೆಗೆ ಸರಬರಾಜು ಮಾಡಲಾಗಿದೆ. ಅಲ್ಲದೆ ಸೋಂಕಿತರ ಚಿಕಿತ್ಸೆಗೆ ಯಾವುದೇ ಅಡಚಣೆಯಾಗದಂತೆ ಐವರ್ಮೆಕ್ಟಿನ್, ಡಾಕ್ಸಿಸೈಕ್ಲಿನ್, ಜಿಂಕ್ ಸಿ, ವಿಟಮಿನ್ನ ಮಾತ್ರೆಗಳು ಖರೀದಿಸಲಾಗಿದೆ ಎಂದು ವಿವರಿಸಿದರು.
ಆಕ್ಸಿಜನ್ ವ್ಯವಸ್ಥೆ
ಜಿಲ್ಲೆಯಲ್ಲಿ ೧೩ ಸಾವಿರ ಲೀಟರ್ ಸಾಮರ್ಥ್ಯದ ಲಿಕ್ವಿಡ್ ಆಕ್ಸಿಜನ್ ಸಂಗ್ರಹಣಾ ಘಟಕ ಸ್ಥಾಪಿಸಲಾಗಿದ್ದು, ನಿತ್ಯ ಸರಾಸರಿ ೪ ಸಾವಿರ ಲೀಟರ್ ಅಮ್ಲಜನಕದ ಅವಶ್ಯಕತೆ ಇದೆ. ಈ ಹಿನ್ನೆಲೆ ಒಂದೇ
ಬಾರಿಗೆ ೧೩ ಸಾವಿರ ಲೀಟರ್ ಸರಬರಾಜು ಮಾಡಿ ನಂತರ ಬಳಕೆಗೆ ಅನುಗುಣವಾಗಿ ಸರಬರಾಜು ಮಾಡಿಕೊಳ್ಳಲು ಮುಖ್ಯಮಂತ್ರಿ ಬಳಿ ಮನವಿ ಮಾಡಲಾಗಿದೆ ಎಂದು ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಜಿಲ್ಲೆಗೆ ನಿಗದಿಯಾಗಿದ್ದ ಆಕ್ಸಿಜನ್ ಹಂಚಿಕೆ ಪ್ರಮಾಣವನ್ನು ೩೫೦೦ ಲೀಟರ್ನಿಂದ ೬ ಸಾವಿರ ಲೀಟರ್ಗೆ ಹೆಚ್ಚಿಸಲಾಗಿದೆ. ಇದರಿಂದ ಜಿಲ್ಲೆಗೆ ಅಗತ್ಯ ಆಕ್ಸಿಜನ್ ಲಭ್ಯವಾಗಲಿದೆ ಎಂದರು. ಆಸ್ಪತ್ರೆಗಳಿಗೆ ಅಗತ್ಯವಿರುವ ವೈದ್ಯಕೀಯ ಹಾಗೂ ಇತರೆ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೇಮಿಸಿಕೊಂಡ ಸಿಬ್ಬಂದಿಗೆ ಸಕಾಲದಲ್ಲಿ ವೇತನ ನೀಡಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹಣ ಬಿಡುಗಡೆಗೊಳಿಸಲು ಕಂದಾಯ ಇಲಾಖೆಗೆ ತಿಳಿಸಿದ್ದು, ಇದಕ್ಕೆ ಇಲಾಖೆ ಸಮ್ಮತಿ ಸೂಚಿಸಿದೆ. ಯಾವುದೇ ಕಾರಣಕ್ಕೂ ವೇತನ ಸಮಸ್ಯೆಯಾಗುವುದಿಲ್ಲ ಎಂದು ಭರವಸೆ ನೀಡಿದರು.
ಹಾಲಿ ಇದ್ದ ೩ ಕೋವಿಡ್ ಕೇರ್ ಸೆಂಟರ್ಗಳ ಜೊತೆ ಹೆಚ್ಚುವರಿಯಾಗಿ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲಾಗಿದೆ ಎಂದರು.
ಹೋಂ ಐಸೋಲೇಷನ್ನಲ್ಲಿರುವವರು ಹೊರಗಡೆ ಸಂಚರಿಸದAತೆ ನಿಗಾವಹಿಸಲು ಹೋಬಳಿಗೆ ಒಬ್ಬರಂತೆ ನೋಡೆÀಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹೋಂ ಐಸೋಲೇಷನ್ನಲ್ಲಿರುವ ವ್ಯಕ್ತಿಗಳನ್ನು ಗುರುತಿಸುವ ಸಲುವಾಗಿ ಅವರುಗಳ ಕೈಗೆ ಸೀಲ್ ಹಾಕಲಾಗುತ್ತಿದೆ. ಹೊರರಾಜ್ಯ, ಜಿಲ್ಲೆಯಿಂದ ಬಂದ ವ್ಯಕ್ತಿಗಳು ೧೪ ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ನಲ್ಲಿರಲು ಆದೇಶಿಸಲಾಗಿದೆ. ಅವರಿಗೂ ಸೀಲ್ ಹಾಕಲು ಸೂಚಿಸಲಾಗಿದೆ. ಜಿಲ್ಲೆಗೆ ಸಂಪರ್ಕ ಕಲ್ಪಿಸುವ ೧೩ ಗಡಿಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದ್ದು ವೈದ್ಯಕೀಯ ಸವಲತ್ತು ನಿರ್ವಹಣೆಗೆ ತಂಡ ರಚಿಸಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ೩೭ ಲಸಿಕಾ ಕೇಂದ್ರಗಳಿದ್ದು, ಸುಮಾರು ೨ ಲಕ್ಷ ಲಸಿಕೆ ಶೇಖರಿಸುವ ಸಾಮರ್ಥ್ಯ ಇದೆ. ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ ೫೦೦ ಪಾಸಿಟಿವ್ ಪ್ರಕರಣ ದಾಖಲಾಗುತ್ತಿದ್ದು ಪಾಸಿಟಿವಿಟಿ ಪ್ರಮಾಣ ೨೪.೯%ರಷ್ಟಿದೆ. ಮರಣ ಪ್ರಕರಣ ಪ್ರಮಾಣ ೧.೧೭% ರಷ್ಟಿದೆ ಎಂದರು.
ಗೋಷ್ಠಿಯಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಎಂಎಲ್ಸಿ ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ವೈದ್ಯಕೀಯ ಕಾಲೇಜು ಡೀನ್ ಡಾ. ಕಾರ್ಯಪ್ಪ, ಅಧೀಕ್ಷಕ ಡಾ.ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಇದ್ದರು.