ಮಡಿಕೇರಿ, ಮೇ ೧೭: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮ ಗಂಟೆ ವೇಳೆಗೆ ೨೯೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೬೮ ಆರ್‌ಟಿಪಿಸಿಆರ್ ಮತ್ತು ೨೫ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೬೭, ಸೋಮವಾರಪೇಟೆ ತಾಲೂಕಿನಲ್ಲಿ ೧೫೪, ವೀರಾಜಪೇಟೆ ತಾಲೂಕಿನಲ್ಲಿ ೭೨ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೦,೪೨೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೫೮೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೧೬,೧೨೪ಮಂದಿ ಗುಣಮುಖ ರಾಗಿದ್ದಾರೆ. ೪೦೫೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೫ ಸಾವು ಉಂಟಾಗಿದ್ದು, ಒಟ್ಟು ೨೪೮ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೭೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ