ಮಡಿಕೇರಿ, ಮೇ ೧೬: ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಿರುವ ೧೦೦ ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಅನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಉದ್ಘಾಟಿಸಿದರು.

ಇದಕ್ಕೂ ಮುನ್ನ ವೈದ್ಯಕೀಯ ಕಾಲೇಜು ಮುಖ್ಯಸ್ಥರು ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ಜೊತೆ ಸಂವಾದದಲ್ಲಿ ಮಾತನಾಡಿದ ಅವರು, ಪ್ರಸ್ತುತ ಪರಿಸ್ಥಿತಿಯಲ್ಲಿ ವೈದ್ಯರು ರೋಗಿಗಳಿಗೆ ದೇವರಾಗಿದ್ದಾರೆ. ಚಿಕಿತ್ಸೆ ಜೊತೆಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸವನ್ನು ವೈದ್ಯರು ಮಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ. ವೈದ್ಯರ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳಬೇಕು. ಗಾಂಭೀರ್ಯತೆ ಅರ್ಥ ಮಾಡಿಕೊಂಡು ವೈದ್ಯಕೀಯ ಜಿಲ್ಲಾಡಳಿತ ಸಕಾಲಕ್ಕೆ ಸ್ಪಂದಿಸುತ್ತಿದೆ. ಸರಕಾರ ಕೂಡ ಅಗತ್ಯ ನೆರವು ನೀಡುತ್ತಿದೆ. ಕೋವಿಡ್ ನಿರ್ವಹಣೆ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯಕೀಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಸೃಷ್ಟಿಸಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಎಂದರು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಸೋಂಕಿತರೊAದಿಗೆ ವೈದ್ಯರು ಬಾಂದವ್ಯ ಬೆಳೆಸಿಕೊಳ್ಳಬೇಕು. ಇದರಿಂದ ರೋಗಿಗಳಲ್ಲಿ ಆತ್ಮಸ್ಥೆöÊರ್ಯ ಸೃಷ್ಟಿಯಾಗುತ್ತದೆ. ವೈದ್ಯರು ಕೂಡ ತಮ್ಮ ಆರೋಗ್ಯದ ಕಡೆ ಕಾಳಜಿ ತೋರಬೇಕು. ರೋಗದ ವಿರುದ್ಧ ಹೋರಾಡಬೇಕು ಎಂದರು.

ಶಾಸಕ ಕೆ.ಜಿ ಬೋಪಯ್ಯ ಮಾತನಾಡಿ, ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಪ್ರತಿಯೊಬ್ಬರು ಪ್ರಾಮಾಣಿಕ ಹಾಗೂ ಬದ್ಧತೆಯಿಂದ ಕೆಲಸ ಮಾಡಬೇಕು. ಕೋವಿಡ್ ಸಹಾಯವಾಣಿ ಮೂಲಕ ಆರೋಗ್ಯ ಸ್ಥಿರತೆ ಬಗ್ಗೆ ಸೋಂಕಿತರ ಕುಟುಂಬಕ್ಕೆ ಕಾಲಕಾಲಕ್ಕೆ ಮಾಹಿತಿ ನೀಡುವ ಕೆಲಸವಾಗಬೇಕು. ಸವಾಲನ್ನು ಸ್ವೀಕರಿಸಿ ಕೊಡಗನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪಣತೊಡಬೇಕೆಂದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಮಾತನಾಡಿ, ೨೦೧೮ರಿಂದ ಕೊಡಗು ಜಿಲ್ಲೆ ಮೇಲೊಂದು ಮೇಲೆ ಸಮಸ್ಯೆಯನ್ನು ಎದುರಿಸುತ್ತಿದೆ. ಪ್ರಸ್ತುತ ಪರಿಸ್ಥಿತಿಯಿಂದ ದೂರವಾಗಲು ಪ್ರತಿಯೊಬ್ಬರು ಕಾರ್ಯದಕ್ಷತೆಯಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಮೆಡಿಕಲ್ ಕಾಲೇಜು ಮುಖ್ಯಸ್ಥ ಡಾ. ಕಾರ್ಯಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೇರ್ ಸೆಂಟರ್‌ನಲ್ಲಿ ಏನಿದೆ..?

೧೦೦ ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ೫೦ ಹಾಸಿಗೆಯನ್ನು ಮಹಿಳೆಯರಿಗೆ, ೫೦ ಹಾಸಿಗೆ ಪುರುಷರಿಗೆ ಎಂದು ಮೀಸಲಿರಿಸಲಾಗಿದೆ. ಇದರಲ್ಲಿ ೫೦ ಆಕ್ಸಿಜನ್ ಸಹಿತ ಬೆಡ್‌ಗಳಾಗಿವೆ. ಜೊತೆಗೆ ೮೭ ಆಕ್ಸಿಜನ್ ಕಾನ್ಸಟ್ರೇಟರ್‌ಗಳನ್ನು ಒದಗಿಸಲಾಗಿದೆ. ಆಮ್ಲಜನಕ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರಿಗೆ ಸುಸಜ್ಜಿತ ಹಾಸಿಗೆ, ಹೊದಿಕೆ, ಆಹಾರ, ಶುದ್ಧ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಬ್ಬಂದಿಗಳು ಕೆಲಸ ಮಾಡಬೇಕು ಎಂದರು