ಮಡಿಕೇರಿ, ಮೇ ೧೮: ಶಿಕ್ಷಕರಿಗೆ ಮೊದಲ ಆದÀ್ಯತೆ ಮೇರೆಗೆ ಲಸಿಕೆ ನೀಡಬೇಕು ಹಾಗೂ ಮುಂಚೂಣಿ ಕಾರ್ಯಕರ್ತರಾಗಿ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿದ ಸಂಘದ ಪ್ರಮುಖರು ಮನವಿ ಸಲ್ಲಿಸಿದರು. ಸೋಂಕಿತರ ಮನೆಗಳಿಗೆ ತೆರಳುವ ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ವಿತರಿಸಬೇಕು. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚುವುದು ಕಷ್ಟಕರವಾಗಿದೆ. ಆದರೆ ಈ ಸಂಬAಧ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಿರುವುದನ್ನು ಹಿಂಪಡೆಯ ಬೇಕೆಂದು ಒತ್ತಾಯಿಸಿದರು.

ಶಿಕ್ಷಕರ ಸಂಚಾರಕ್ಕೆ ಸಮರ್ಪಕ ವ್ಯವಸ್ಥೆ ಇಲ್ಲ, ಈ ಹಿನ್ನೆಲೆ ವಾಹನ ವ್ಯವಸ್ಥೆ ಕಲ್ಪಿಸಬೇಕು. ಶಿಕ್ಷಕರಿಗೆ ಸೋಂಕು ತಗುಲಿದ್ದಲ್ಲಿ ಆದ್ಯತೆ ಮೇರೆಗೆ ಪ್ರತ್ಯೇಕ ಬೆಡ್‌ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಸುರೇಂದ್ರ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಬಸವರಾಜು, ಕೊಡಗು ವಿದ್ಯಾ ಇಲಾಖೆ ನೌಕರರ ಸಂಘದ ನಿರ್ದೇಶಕ ದೇವಾನಂದ್ ಇದ್ದರು.