ಮಡಿಕೇರಿ, ಮೇ ೧೮: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ೮ ಗಂಟೆ ವೇಳೆಗೆ ೧೯೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೬೦ ಆರ್.ಟಿ.ಪಿ.ಸಿ.ಆರ್ ಮತ್ತು ೨೩ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೬೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೪ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೯ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಸೋಮವಾರಪೇಟೆ ತಾಲೂಕಿನಲ್ಲಿ ೬೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೧ ಆರ್.ಟಿ.ಪಿ.ಸಿ.ಆರ್ ಮತ್ತು ೧೮ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ವೀರಾಜಪೇಟೆ ತಾಲೂಕಿನಲ್ಲಿ ೬೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೫೫ ಆರ್.ಟಿ.ಪಿ.ಸಿ.ಆರ್ ಮತ್ತು ೫ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೦,೬೨೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೯೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೧೬,೮೨೦ ಮಂದಿ ಗುಣಮುಖರಾಗಿದ್ದಾರೆ. ೩೫೪೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬ ಸಾವು ಉಂಟಾಗಿದ್ದು, ಒಟ್ಟು ೨೫೪ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೫೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.