ಮಡಿಕೇರಿ, ಮೇ ೨೧: ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಆ ದಿಸೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂಬAಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಾಲೂಕುವಾರು ಪ್ರತ್ಯೇಕವಾಗಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಸೋಮವಾರಪೇಟೆ ತಾಲೂಕು ಸಂಬAಧಪಟ್ಟAತೆ ಸಭೆ ನಡೆಸಿ ಮಾಹಿತಿ ಪಡೆದರು.

ಸೂಕ್ಷö್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೇಚ್ಚರಿಕೆ ವಹಿಸಬೇಕು. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುಂಚಿತವಾಗಿ ಲಿಖಿತವಾಗಿ ಕುಟುಂಬಗಳಿಗೆ ಮಾಹಿತಿ ನೀಡಬೇಕು. ಕಂದಾಯ, ಪೊಲೀಸ್, ಪಂಚಾಯತ್‌ರಾಜ್, ಅರಣ್ಯ, ಸೆಸ್ಕ್, ಲೋಕೋಪಯೋಗಿ ಹೀಗೆ ಹಲವು ಇಲಾಖೆಗಳು ಸಮನ್ವಯತೆ¬ಂದ ಕಾರ್ಯ ನಿರ್ವಹಿಸಬೇಕು. ಮಳೆ ಹಾನಿ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡಬೇಕು.

ಸೂಕ್ಷö್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್ಪೊರ್ಸ್ ಸಮಿತಿ ಸಭೆ ನಡೆಸುವುದು. ಸೂಕ್ಷö್ಮ ಪ್ರದೇಶಗಳಿಗೆ ಎನ್‌ಡಿಆರ್‌ಎಫ್ ತಂಡ ಭೇಟಿ ನೀಡುವುದು ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು, ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ನಿರ್ದೇಶನ ನೀಡಿದರು.

ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಛಾಯಚಿತ್ರ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಹಾಗೆಯೇ ಭೂ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯತ್ ಕಂಬಕ್ಕೆ ಮರ ಬಿದ್ದಲ್ಲಿ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸವವರಿಗೆ ತರಬೇತಿ ನೀಡುವುದು ಮತ್ತಿತ್ತರ ಸಂಬAಧ ಅಗತ್ಯ ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು.

ನೋಡಲ್ ಅಧಿಕಾರಿ ಶಿವು ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್ಪೊರ್ಸ್ ಸಮಿತಿ ಸಭೆ ನಡೆಸುವುದು. ಸೂಕ್ಷö್ಮ ಪ್ರದೇಶಗಳಿಗೆ ಎನ್‌ಡಿಆರ್‌ಎಫ್ ತಂಡ ಭೇಟಿ ನೀಡುವುದು ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು, ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ನಿರ್ದೇಶನ ನೀಡಿದರು.

ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಛಾಯಚಿತ್ರ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಹಾಗೆಯೇ ಭೂ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯತ್ ಕಂಬಕ್ಕೆ ಮರ ಬಿದ್ದಲ್ಲಿ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸವವರಿಗೆ ತರಬೇತಿ ನೀಡುವುದು ಮತ್ತಿತ್ತರ ಸಂಬAಧ ಅಗತ್ಯ ಕ್ರಮಕೈಗೊಳ್ಳುವಂತೆ ಸಲಹೆ ಮಾಡಿದರು.

ನೋಡಲ್ ಅಧಿಕಾರಿ ಶಿವು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಡಿವೈಎಸ್ಪಿ ಶೈಲೇಂದ್ರ ಕುಮಾರ್, ಎನ್‌ಡಿಆರ್‌ಎಫ್ ತಂಡದ ಪ್ರಮುಖರಾದ ಬಬ್ಲು ವಿಶ್ವಾಸ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ಬಗ್ಗೆ ಹಲವು ಮಾಹಿತಿ ನೀಡಿದರು.