ಕೊಡ್ಲಿಪೇಟೆ, ಮೇ ೨೩: ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಕಾರ್ಮಿಕ ಸಂಘಟನೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಕೊಡ್ಲಿಪೇಟೆಯಲ್ಲಿ ಕಟ್ಟಡ ಕಾರ್ಮಿಕರು ಬೆಂಬಲ ನೀಡಿದರು.

ತಾವು ಕೆಲಸ ಮಾಡುತ್ತಿದ್ದ ಸ್ಥಳ, ಮನೆಗಳಲ್ಲಿಯೇ ಪ್ರತಿಭಟನಾ ಫಲಕಗಳನ್ನು ಪ್ರದರ್ಶಿಸಿ ಸಾಂಕೇತಿಕವಾಗಿ ಪ್ರತಿಭಟಿಸಿದರು. ಸಿ.ಐ.ಟಿ.ಯು. ಸೋಮವಾರಪೇಟೆ ತಾಲೂಕು ಕಟ್ಟಡ ಕಾರ್ಮಿಕ ಘಟಕದ ಮುಖಂಡರಾದ ನಾಗೇಶ್ ಅವರ ನೇತೃತ್ವದಲ್ಲಿ ಕೆಲಸದ ಸ್ಥಳಗಳಲ್ಲಿ ಬೇಡಿಕೆಗಳ ಆಗ್ರಹ ಫಲಕಗಳನ್ನು ಹಿಡಿದು ಪ್ರತಿಭಟಿಸಲಾಯಿತು.