ವೀರಾಜಪೇಟೆ, ಮೇ ೨೪: ವೀರಾಜಪೇಟೆ ವಿಭಾಗದ ವೀರಾಜಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಬರುವ ಗ್ರಾಮಗಳಾದ ಕರಡ, ಮರಂದೋಡ, ಚೇಲವಾರ, ಕೋಕೇರಿ, ನರಿಯಂದಡ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ತಾ. ೨೫ರಂದು (ಇಂದು) ಹಮ್ಮಿಕೊಳ್ಳಲಾಗಿದೆ. ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಉಪ ವಲಯ ಅರಣ್ಯಾಧಿಕಾರಿ, ಚೆಯ್ಯಂಡಾಣೆ ಶಾಖೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.