ಗೋಣಿಕೊಪ್ಪಲು, ಮೇ ೨೫: ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಹಾಲಿ ಸದಸ್ಯ ಹರಿಶ್ಚಂದ್ರಪುರದ ನಿವಾಸಿ ನಜೀರ್ ಅಹಮದ್ ಕೋವಿಡ್‌ಗೆ ಬಲಿಯಾಗಿದ್ದಾರೆ.
ತಾ. ೨೫ ರಂದು ಕೊರೊನಾ ಸೋಂಕಿನ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಾ. ೨೫ರ ಮುಂಜಾನೆ ನಿಧನ ಹೊಂದಿದ್ದಾರೆ.
ನಜೀರ್ ಅಹಮದ್ ನಿಧನಕ್ಕೆ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.