ಸುಂಟಿಕೊಪ್ಪ, ಮೇ ೨೫: ನಿವೃತ್ತ ಎಎಸ್ಐ ಸೋಮಯ್ಯ (ಸನ್ನಿ-೭೦) ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಇರ್ವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಕೋವಿಡ್ ೧೯ ನಿಯಮದ ಪ್ರಕಾರ ಮಡಿಕೇರಿ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.