ಕುಶಾಲನಗರ, ಮೇ ೨೪: ಲಾಕ್ ಡೌನ್ ನಡುವೆ ಅನಾವಶ್ಯಕ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕುಶಾಲನಗರ ಪೊಲೀಸರು ವಶ ಪಡಿಸಿ ಕ್ರಮಕೈಗೊಂಡಿದ್ದಾರೆ. ಪಟ್ಟಣದಲ್ಲಿ ಹೆಲ್ಮೆಟ್ ಧರಿಸದೆ ಬೇಕಾಬಿಟ್ಟಿ ತಿರುಗಾಡುತ್ತಿದ್ದ ಹಲವು ದ್ವಿಚಕ್ರ ವಾಹನ ಸವಾರರನ್ನು ಪತ್ತೆ ಹಚ್ಚಿದ ಕುಶಾಲನಗರ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಉಳಿದಂತೆ ಬೈಕ್‌ಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ಕ್ರಮ ಕೈಗೊಂಡಿದ್ದಾರೆ.