ಗುಡ್ಡೆಹೊಸೂರು, ಮೇ ೨೫: ಇಲ್ಲಿನ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ವರ್ತಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸಬೇಕೆಂದು ಗ್ರಾಮ ಪಂಚಾಯಿತಿ ತಿಳಿಸಿದೆ. ಪರೀಕ್ಷೆ ಮಾಡಿಸಿಕೊಳ್ಳದ ಮತ್ತು ಪಾಸಿಟಿವ್ ವರದಿ ಬಂದ ವ್ಯಾಪಾರಿಗಳ ಅಂಗಡಿ ಗಳನ್ನು ಮುಚ್ಚಲಾಗುವುದು ಅಲ್ಲದೆ ನಿರಾಕರಿಸಿದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸ ಲಾಗುವುದು ಎಂದು ಪಂಚಾಯಿತಿ ಅಧಿಕಾರಿ ಶ್ಯಾಂ ತಮ್ಮಯ್ಯ ತಿಳಿಸಿದ್ದಾರೆ. ಆರೋಗ್ಯ ಇಲಾಖಾಧಿಕಾರಿಗಳು ಇಂದು ಬೆಳಿಗ್ಗೆ ೧೦ ಗಂಟೆಯಿAದ ಇಲ್ಲಿನ ಸಮುದಾಯಭವನದಲ್ಲಿ ಕೋವಿಡ್ ಪರೀಕ್ಷೆ ನಡೆಸಲಿದ್ದಾರೆ.