ಕೂಡಿಗೆ, ಮೇ ೨೪: ಕೂಡಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಸೆಂಟರ್‌ಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೋಂಕಿತರಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಎಲ್ಲಾ ಕೋವಿಡ್ ಸೆಂಟರ್‌ಗಳಲ್ಲಿ ಸೋಂಕಿತ ವ್ಯಕ್ತಿಗಳಿಗೆ ಉತ್ತಮವಾದ ಚಿಕಿತ್ಸೆ, ಇದರ ಜೊತೆಯಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ. ಎಲ್ಲರೂ ಒಗ್ಗೂಡಿ ರೋಗ ಹರಡದಂತೆ ಕ್ರಮಕೈಗೊಳ್ಳುವ ಎಂದರು ಎಲ್ಲಾ ಇಲಾಖೆಯ ಅಧಿಕಾರಿಗಳು ಶ್ರಮ ವಹಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಮತ್ತು ಕೇಂದ್ರದ ಸಿಬ್ಬಂದಿ ವರ್ಗದವರು ಹಾಜರಿದ್ದರು.