ಮೃತದೇಹ ಹಸ್ತಾಂತರಿಸದಿದ್ದಲ್ಲಿ ಆಸ್ಪತ್ರೆ ನೋಂದಣಿ ರದ್ದು

ಬೆಂಗಳೂರು, ಮೇ ೨೫: ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಸೋಂಕಿತರು ಮೃತಪಟ್ಟಲ್ಲಿ, ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬAಧಿಕರಿಗೆ ನೀಡುವಂತೆ ಷರತ್ತನ್ನು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ, ಕರ್ನಾಟಕ ಪ್ರೆöÊವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ (ಕೆಪಿಎಂಇ), ೨೦೦೭ ಭಾಗ ೧೧ (i) ಉಪ ಷರತ್ತು (vi) ರ ಅನ್ವಯ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವಂತಿಲ್ಲ / ಒತ್ತಡ ಹೇರುವಂತಿಲ್ಲ ಹಾಗೂ ಬಿಲ್ ಪಾವತಿ ಮಾಡದೆ ಇದ್ದ ಪಕ್ಷದಲ್ಲಿ ಮೃತದೇಹದ ಹಸ್ತಾಂತರ ಮಾಡಲು ನಿರಾಕರಿಸುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಆದ್ದರಿಂದ, ಇಂತಹ ಪ್ರಕರಣಗಳು ವರದಿಯಾದಲ್ಲಿ ಕೆಪಿಎಂಇ ಕಾಯ್ದೆಯ ನಿಯಮಾನುಸಾರ ಸಂಬAಧಿಸಿದ ಆಸ್ಪತ್ರೆಯ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕಾರ್ಯಪ್ರವೃತರಾಗಲು ಸೂಚಿಸಿದೆ. ಮುಂದುವರೆದು, ಈ ರೀತಿ ವರದಿಯಾದ ಪ್ರಕರಣಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಾರಕ್ಕೆ ಒಂದು ಬಾರಿ, ರಾಜ್ಯಮಟ್ಟಕ್ಕೆ ವರದಿ ಸಲ್ಲಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶಿಸಿದ್ದಾರೆ.

ಕೊರೊನಾ ಮಕ್ಕಳ ಮೇಲೆ ಪರಿಣಾಮ; ನಂಬಲು ಯಾವುದೇ ಕಾರಣಗಳಿಲ್ಲ

ನವದೆಹಲಿ, ಮೇ ೨೫: ಮುಂಬರುವ ವಾರಗಳು ಮತ್ತು ತಿಂಗಳು ಅಥವಾ ಮುಂದಿನ ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ನಂಬಲು ಯಾವುದೇ ಕಾರಣಗಳಿಲ್ಲ ಎಂದು ಸರ್ಕಾರಿ ಕಾರ್ಯ ಸಮೂಹದ ಮುಖ್ಯಸ್ಥರು ಹೇಳಿದ್ದಾರೆ. ಆದರೆ ಮಕ್ಕಳ ಕೋವಿಡ್ ಸೇವೆ ಸುಧಾರಿಸಲು ಹೆಚ್ಚುವರಿ ಸಂಪನ್ಮೂಲ ಸಂಗ್ರಹದ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ. ಭಾರತದ ಕೋವಿಡ್-೧೯ ವರ್ಕಿಂಗ್ ಗ್ರೂಪ್‌ನ ಅಧ್ಯಕ್ಷ ಡಾ. ಎನ್.ಕೆ. ಅರೋರಾ, ಭಾರತೀಯ ದತ್ತಾಂಶವು ಪ್ರಸ್ತುತ ಕೊರೊನಾ ವೈರಸ್ ತಳಿಗಳು ಯುವಕರಿಗೆ ಅಥವಾ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತವೆ ಎಂದು ಯಾವುದೇ ನಿರ್ದಿಷ್ಟ ಮುನ್ಸೂಚನೆ ನೀಡಿಲ್ಲ ಎಂದಿದ್ದಾರೆ. ಆದಾಗ್ಯೂ, ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆಗಳು ಹೆಚ್ಚಾದ ಕಾರಣ, ಎರಡೂ ವಯಸ್ಸಿನ ರೋಗಿಗಳು ಹೆಚ್ಚು ಗಮನಕ್ಕೆ ಬರುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಸಮಯದಲ್ಲಿ ಯಾವುದೇ ಮೂರನೇ ಅಲೆಯ ಬಗ್ಗೆ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಐಎನ್‌ಸಿಎಲ್‌ಇಎನ್ ಟ್ರಸ್ಟ್ನ ನಿರ್ದೇಶಕರಾಗಿರುವ ಅರೋರಾ ಅವರು ತಿಳಿಸಿದ್ದಾರೆ. ಆದರೆ ನಮ್ಮ ದೇಶದಿಂದ ಮತ್ತು ಪ್ರಪಂಚದ ಇತರ ಭಾಗಗಳಿಂದ ಯಾವ ಅನುಭವ ಲಭ್ಯವಿದೆ ಎಂಬುದರ ಆಧಾರದ ಮೇಲೆ, ಮುಂಬರುವ ವಾರಗಳು ಮತ್ತು ತಿಂಗಳುಗಳಲ್ಲಿ ಅಥವಾ ಮುಂದಿನ ಅಲೆಯಲ್ಲಿ ಮಕ್ಕಳು ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ನಂಬಲು ಯಾವುದೇ ಕಾರಣಗಳಿಲ್ಲ ಎಂದು ಅವರು ಹೇಳಿದರು. ಆದರೆ ಮಕ್ಕಳ ಕೋವಿಡ್ ಸೇವೆಗಳನ್ನು ಸುಧಾರಿಸುವ ಮತ್ತು ಉಳಿದ ಕೋವಿಡ್ ನಿರ್ವಹಣಾ ಚೌಕಟ್ಟಿನೊಂದಿಗೆ ಹೊಂದಾಣಿಕೆ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಹೆಚ್‌ಪಿಸಿಎಲ್‌ನಲ್ಲಿ ಭಾರೀ ಅಗ್ನಿ ಅವಘಡ

ವಿಶಾಖಪಟ್ಟಣಂ, ಮೇ ೨೫: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್(ಹೆಚ್‌ಪಿಸಿಎಲ್)ನ ವಿಶಾಖ ಸಂಸ್ಕರಣಾಗಾರದಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಎಲ್ಲಾ ಉದ್ಯೋಗಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಬೆಂಕಿ ಕಾಣಿಸಿಕೊಳ್ಳುವ ಮೊದಲು ಒಂದೆರಡು ಸ್ಫೋಟಗಳು ಸಂಭವಿಸಿವೆ. ಹೆಚ್‌ಪಿಸಿಎಲ್ ಘಟಕದಿಂದ ದೊಡ್ಡ ಪ್ರಮಾಣದ ಹೊಗೆ ಬರುತ್ತಿದೆ ಎಂದಿದ್ದಾರೆ. ಮಧ್ಯಾಹ್ನ ೩.೧೫ ರ ಸುಮಾರಿಗೆ ಸಂಸ್ಕರಣಾಗಾರದ ಹಳೆಯ ಟರ್ಮಿನಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ನಡೆದಾಗ ಸುಮಾರು ೧೦೦ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ. ಕಂಪೆನಿಯ ಸೈರನ್‌ಗಳು ತಕ್ಷಣವೇ ಎಚ್ಚರಿಕೆ ನೀಡಿದ್ದರಿಂದ ಅಲ್ಲಿಂದ ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಲಾಗಿದೆ. ಹೀಗಾಗಿ ಕಾರ್ಮಿಕರಿಗೆ ಯಾವುದೇ ಸಾವುನೋವು ಅಥವಾ ಗಾಯಗಳಾಗಿಲ್ಲ. ಆದರೆ, ಭಾರೀ ಬೆಂಕಿ ಮತ್ತು ಹೊಗೆ ಶ್ರೀಹರಿಪುರಂ ಮತ್ತು ಮಲ್ಕಾಪುರಂ ಪ್ರದೇಶಗಳ ಜನರಲ್ಲಿ ಭೀತಿ ಹುಟ್ಟಿಸಿದೆ. ಹೆಚ್‌ಪಿಸಿಎಲ್ ಅಧಿಕಾರಿಗಳು ಬೆಂಕಿ ನಿಯಂತ್ರಿಸಲು ಇತ್ತೀಚಿನ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆಂದು ವರದಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಘಟಕದ ಆವರಣದಿಂದ ನೌಕರರನ್ನು ಸ್ಥಳಾಂತರಿಸಲಾಗಿದೆ. ಸಂಸ್ಕರಣಾಗಾರದಲ್ಲಿನ ತ್ಯಾಜ್ಯ ಅನಿಲ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದರೂ, ಕೊನೆಯದಾಗಿ ವರದಿಗಳು ಬಂದಾಗ ಘಟಕದಿಂದ ಹೊಗೆ ಹೊರಹೊಮ್ಮುತ್ತಿತ್ತು. ಈ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಬೆಡ್ ಬ್ಲಾಕಿಂಗ್ ದಂಧೆ : ಓರ್ವನ ಬಂಧನ

ಬೆAಗಳೂರು, ಮೇ ೨೫: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬAಧಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ ಮತ್ತು ರೂಂನಲ್ಲಿದ್ದ ಸಿಸಿಟಿವಿ ಮಾಹಿತಿ ಆಧರಿಸಿ ಆರೋಪಿಯ ಬಂಧನವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್ ರೂಮ್‌ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನಲಾಗಿ ಇದನ್ನು ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಈ ತಿಂಗಳ ಆರಂಭದಲ್ಲಿ ಬಯಲು ಮಾಡಿದ್ದರು. ಸದ್ಯ ಇಡೀ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ.

ಸಿಡಿ ಪ್ರಕರಣ : ಸಂತ್ರಸ್ತೆಯ ಕುಟುಂಬಸ್ಥರಿಗೆ ನೋಟೀಸ್

ವಿಜಯಪುರ, ಮೇ ೨೫: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬAಧಿಸಿದAತೆ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ಮಂಗಳವಾರ ನೋಟೀಸ್ ನೀಡಿದ್ದಾರೆ. ಮಗಳನ್ನು ಅಪಹರಣ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬAಧಿಸಿದAತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ತಮ್ಮ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸಿಡಿ ಯುವತಿ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ನಂತರ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ಹೀಗಾಗಿ ಜಿಲ್ಲೆಯ ನಿಡಗುಂದಿಯಲ್ಲಿರುವ ಯುವತಿ ಕುಟುಂಬಸ್ಥರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ತಾ. ೨೧ ರಂದು ಸಂತ್ರಸ್ತೆ ಕುಟುಂಬಸ್ಥರಿಗೆ ನೋಟೀಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯ್ ಕುಮಾರ್ ಅವರು ಯುವತಿ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಲಾಕ್‌ಡೌನ್ ಬಳಿಕ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಈ ಮಧ್ಯೆ, ರಾಸಲೀಲೆ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವೀಡಿಯೋದಲ್ಲಿರುವುದು ನಾನೇ ಎಂದು ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಂತಾಗಿದೆ.

ರಾಜ್ಯಕ್ಕೆ ನೂರು ಆಮ್ಲಜನಕ ಸಾಂದ್ರಕ ನೀಡಿದ ವಿಶ್ವ ಆರೋಗ್ಯ ಸಂಸ್ಥೆ

ಬೆAಗಳೂರು, ಮೇ ೨೫: ಕೊರೊನಾ ವಿರುದ್ಧ ರಾಜ್ಯ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಸಹಾಯ ಹಸ್ತ ಚಾಚಿರುವ ವಿಶ್ವ ಆರೋಗ್ಯ ಸಂಸ್ಥೆ ನೂರು ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ಅನ್ನು ದೇಣಿಗೆಯಾಗಿ ನೀಡಿದೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ನಿಯೋಗ ನೂರು ಕಾನ್ಸನ್‌ಟ್ರೇಟರ್ಸ್ಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಹಸ್ತಾಂತರಿಸಿತು. ಕಂದಾಯ ಸಚಿವ ಆರ್. ಅಶೋಕ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸೇರಿದಂತೆ ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.