ಮಡಿಕೇರಿ, ಮೇ ೨೫: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ೮ ಗಂಟೆ ವೇಳೆಗೆ ೨೨೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.

೧೭೭ ಆರ್.ಟಿ.ಪಿ.ಸಿ.ಆರ್ ಮತ್ತು ೪೭ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೫೯, ಸೋಮವಾರಪೇಟೆ ತಾಲೂಕಿನಲ್ಲಿ ೧೧೬, ವೀರಾಜಪೇಟೆ ತಾಲೂಕಿನಲ್ಲಿ ೪೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೨,೯೫೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೩೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೦,೦೯೫ ಮಂದಿ ಗುಣಮುಖರಾಗಿದ್ದಾರೆ.

೨೫೬೩ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩ ಸಾವು ಉಂಟಾಗಿದ್ದು, ಒಟ್ಟು ೨೯೮ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೩೮೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.