ಸೋಮವಾರಪೇಟೆ, ಮೇ ೨೭: ಕೊರೊನಾ ಸೋಂಕಿಗೆ ತುತ್ತಾಗಿ ಮರಣಕ್ಕೀಡಾದ ಭಾರತೀಯ ಜನತಾ ಪಾರ್ಟಿಯ ಈರ್ವರು ಮಹಿಳಾ ನಾಯಕಿಯರ ನಿಧನಕ್ಕೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪಕ್ಷದ ಕಚೇರಿಯಲ್ಲಿ ನಡೆದ ಸಂತಾಪ ಸಭೆಯಲ್ಲಿ ಪ.ಪಂ. ಅಧ್ಯಕ್ಷೆಯಾಗಿದ್ದ ನಳಿನಿ ಗಣೇಶ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕಿಯಾಗಿದ್ದ ಉಷಾ ತೇಜಸ್ವಿ ಅವರುಗಳ ನಿಧನದ ಹಿನ್ನೆಲೆ ಅವರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಸಮಾಜ ಸೇವೆಯನ್ನು ಸ್ಮರಿಸಲಾಯಿತು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಬಿಜೆಪಿ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಪ.ಪಂ. ಸದಸ್ಯರಾದ ಶುಭಾಕರ್, ಪಿ.ಕೆ. ಚಂದ್ರು ಸೇರಿದಂತೆ ಇತರರು ಭಾಗವಹಿಸಿದ್ದರು.