ವೀರಾಜಪೇಟೆ, ಮೇ ೨೮: ವೀರಾಜಪೇಟೆ ವಿಭಾಗದ, ವೀರಾಜಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಬರುವ ಗ್ರಾಮಗಳಾದ ಮರಂದೋಡ, ಚೇಲಾವರ, ಕೋಕೇರಿ, ನರಿಯಂದಡ, ಕರಡ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ತಾ. ೨೯ರಂದು (ಇಂದು) ಪಂಚಾಯಿತಿಯವರ ಹಾಗೂ ಸಾರ್ವಜನಿಕರ ಕೋರಿಕೆಯ ಮೇರೆಗೆ ಹಮ್ಮಿಕೊಂಡಿದ್ದು, ಶಾಲಾ ಮಕ್ಕಳು, ತೋಟದ ಕಾರ್ಮಿಕರು ಆ ದಿವಸ ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಅರಣ್ಯ ಇಲಾಖೆ ಮನವಿ ಮಾಡಿದೆ.