ಮಡಿಕೇರಿ, ಮೇ ೨೮: ಹೊಸ ಕೋವಿಡ್ ೧೯ ಮಾರ್ಗಸೂಚಿಯಂತೆ ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿಯ ಸಭೆಯಲ್ಲಿ ಬ್ಯಾಂಕ್ ಕಾರ್ಯಾವಧಿಯನ್ನು ಬದಲಾಯಿಸಿ ಪರಿಷ್ಕರಿಸಲಾಗಿದೆ.
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ
ಎಲ್ಲಾ ಬ್ಯಾಂಕುಗಳ ಶಾಖೆಗಳು, ವಲಯ,
ಕ್ಷೇತ್ರೀಯ ಕಾರ್ಯಾಲಯಗಳ ಸಮಯ ಬದಲಾವಣೆಗೊಳಿಸಲಾಗಿದೆ.
ಬ್ಯಾಂಕಿAಗ್ ವ್ಯವಹಾರದ ಸಮಯ ವಾರದ ಎಲ್ಲಾ ದಿನಗಳಲ್ಲಿ (ಭಾನುವಾರ ಹೊರತು ಪಡಿಸಿ) ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ರವರೆಗೆ ಮತ್ತು ಕೆಲಸದ ಸಮಯವು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ ರವರೆಗೆ (ಆಡಳಿತ ಕಚೇರಿಗಳು ಸೇರಿದಂತೆ). ಈ ಪರಿಷ್ಕೃತ ಸಮಯದ ವ್ಯವಸ್ಥೆಯು ಜೂನ್ ೧ ರಿಂದ ರಿಂದ ೫ ರವರೆಗೆ ಇದ್ದು ದಿನಾಂಕ ಜೂನ್ ೭ ರಂದು ಅಂದಿನ ಸ್ಥಿತಿಗತಿಗಳನ್ನು ಅವಲೋಕಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿಯು ತಿಳಿಸಿದೆ.
ಬ್ಯಾಂಕುಗಳಲ್ಲಿ ನಡೆಯುತ್ತಿರುವ ಆಧಾರ್ ನೋಂದಣಿ ಕೇಂದ್ರಗಳ ಸೇವೆಯನ್ನು ಮುಂದಿನ
(ಮೊದಲ ಪುಟದಿಂದ) ಆದೇಶದವರೆಗೆ ರದ್ದುಪಡಿಸಲಾಗಿದೆ. ಶಾಖೆಗಳು ಕೇವಲ ಮೂಲಭೂತ ಬ್ಯಾಂಕಿAಗ್ ಸೇವೆಗಳಾದ ನಗದು ವ್ಯವಹಾರಗಳು, ಕ್ಲಿಯರಿಂಗ್ ಸೇವೆಗಳು, ಹಣ ವರ್ಗಾವಣೆ, ಸರಕಾರಿ ವ್ಯವಹಾರಗಳು ಹಾಗೂ ಹೊಸ ಬೆಳೆ ಸಾಲಗಳ (ಕೆ.ಸಿ.ಸಿ) ಮಂಜೂರಾತಿ, ನವೀಕರಣಕ್ಕಾಗಿ ಮಾತ್ರ ತೆರೆದಿರುತ್ತದೆ.
ಗ್ರಾಹಕರು ಡಿಜಿಟಲ್ ಸೇವೆಗಳಾದ ಎಟಿಎಂ, ನೆಟ್ ಬ್ಯಾಂಕಿAಗ್, ಮೊಬೈಲ್ ಬ್ಯಾಂಕಿAಗ್ ಮತ್ತು ಇತರ ಡಿಜಿಟಲ್ ಸೇವೆಗಳನ್ನು ಉಪಯೋಗಿಸಿಕೊಂಡು ಬ್ಯಾಂಕು ಗಳಿಗೆ ಭೇಟಿ ನೀಡುವ ಸಂದರ್ಭವನ್ನು ಕಡಿಮೆಗೊಳಿಸಲು ಈ ಮೂಲಕ ಕೋರಲಾಗಿದೆ.
ಬ್ಯಾಂಕಿAಗ್ ಮಿತ್ರರ ಸೇವೆಗಳನ್ನು (ಅಂಚೆ ಕಚೇರಿಯ ಬ್ಯಾಂಕ್ ಮಿತ್ರರ ಸೇವೆಯೂ ಸೇರಿ) ಆಯಾಯಾ ಗ್ರಾಮಗಳಲ್ಲಿ ಲಭ್ಯವಿರುವುದರಿಂದ ಗ್ರಾಹಕರು ತಮ್ಮ ತಮ್ಮ ಗ್ರಾಮಗಳಲ್ಲಿ ಮೂಲಭೂತ ಬ್ಯಾಂಕಿAಗ್ ಸೇವೆಗಳನ್ನು ಪಡೆಯಬಹುದು.
ಸಾರ್ವಜನಿಕರು ಬ್ಯಾಂಕಿAಗ್ ವ್ಯವಹಾರಗಳಿಗಾಗಿ ಶಾಖೆಗೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಮುಖಗವಸಗಳನ್ನು ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಇತರ ಕೋವಿಡ್ ನಿಯಮಾವಳಿಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಮನವಿ ಮಾಡಿದ್ದಾರೆ.