ರಾಜ್ಯ ರಾಜಧಾನಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ
ಬೆಂಗಳೂರು, ಮೇ ೨೮: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದ್ದು, ಈವರೆಗೂ ಇಬ್ಬರು ಮಹಿಳೆಯರು ಸೇರಿ ೬ ಮಂದಿ ಆರೋಪಿಗಳನ್ನು ಬಂಧನಕ್ಕೊಳ ಪಡಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವೀಡಿಯೋ ವೈರಲ್ ಆಗಿತ್ತು, ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು, ನಮ್ಮ ರಾಜ್ಯದ ಪೊಲೀಸರು ಅದನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಎಫ್ಐಆರ್ನಲ್ಲಿ ಸಂತ್ರಸ್ತ ಯುವತಿಯ ಹೆಸರು ದಾಖಲಾಗಿಲ್ಲ. ಪೂರ್ಣ ಪ್ರಮಾಣದ ತನಿಖೆಯ ಮೇಲೆ ಸತ್ಯಾಂಶ ಹೊರಬರುತ್ತದೆ ಎಂದು ಹೇಳಿದ್ದಾರೆ. ಆರಂಭದಲ್ಲಿ ಸಾಮೂಹಿಕ ಅತ್ಯಾಚಾರ ನಡೆದ ಪ್ರದೇಶ ಯಾವುದೆಂದು ಗೊತ್ತಿರಲಿಲ್ಲ, ವೀಡಿಯೋ ವೈರಲ್ ಆದ ಮೂಲ ಹಿಡಿದು ತನಿಖೆ ನಡೆಸಿದಾಗ ಆ ಪ್ರದೇಶ ಬೆಂಗಳೂರೆAದು ತಿಳಿದುಬಂದಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಕಮಿಷನರ್ ಅವರೇ ಈ ಪ್ರಕರಣದ ಜಾಲ ಪತ್ತೆ ಹಚ್ಚಲು ನೇತೃತ್ವ ವಹಿಸಿದ್ದರು. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ವೀಡಿಯೋ ಕುರಿತು ನಡೆಸಲಾದ ಪ್ರಾಥಮಿಕ ತನಿಖಾ ವರದಿ ಆಧರಿಸಿ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ೬ ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಇದೀಗ ಸಂತ್ರಸ್ತ ಯುವತಿ ಪತ್ತೆಗಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ. ಬಂಧನಕ್ಕೊಳಗಾಗಿರುವ ಎಲ್ಲರೂ ಒಂದೇ ಗುಂಪಿಗೆ ಸೇರಿದವರಾಗಿದ್ದಾರೆ. ಎಲ್ಲರೂ ಬಾಂಗ್ಲಾದೇಶ ಮೂಲದವರೇ ಆಗಿದ್ದಾರೆ. ಸಂತ್ರಸ್ತ ಯುವತಿಯನ್ನೂ ಬಾಂಗ್ಲಾದೇಶದಿAದ ಅಪಹರಿಸಿ ಕರೆತಂದAತಿದೆ. ಆರ್ಥಿಕ ವಿಚಾರವಾಗಿ ಆರೋಪಿಗಳು ಯುವತಿಗೆ ಕಿರುಕುಳ ನೀಡಿದ್ದಾರೆಂದು ತಿಳಿಸಿದ್ದಾರೆ.
ವಿಮಾನ ಸೇವೆ ಸ್ಥಗಿತ : ಜೂನ್ ೩೦ ರವರೆಗೆ ವಿಸ್ತರಣೆ
ನವದೆಹಲಿ, ಮೇ ೨೮: ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆ ಕಳೆದ ಒಂದು ವರ್ಷದಿಂದ ಅಂರ್ರಾಷ್ಟಿçÃಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜೂನ್ ೩೦ ರವರೆಗೆ ವಿಸ್ತರಿಸಲಾಗಿದೆ. ಅಂರ್ರಾಷ್ಟಿçÃಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜೂನ್ ೩೦ ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಅದಾಗ್ಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಕಳೆದ ವರ್ಷ ಮಾರ್ಚ್ ೨೫ ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂರ್ರಾಷ್ಟಿçÃಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ ೨೦೨೦ ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್' ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂರ್ರಾಷ್ಟಿçÃಯ ವಿಮಾನಯಾನವನ್ನು ಅನುಮತಿಸಲಾಗಿದೆ. ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂರ್ರಾಷ್ಟಿçÃಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.
ದೆಹಲಿಯಲ್ಲಿ ಸೋಮವಾರದಿಂದ ಅನ್ಲಾಕ್ ಪ್ರಕ್ರಿಯೆ
ನವದೆಹಲಿ, ಮೇ ೨೮: ರಾಷ್ಟç ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿನ ಅಬ್ಬರ ಗಣನೀಯವಾಗಿ ತಗ್ಗಿರುವ ಹಿನ್ನಲೆ ಸೋಮವಾರದಿಂದ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಜ್ರಿವಾಲ್ ಅವರು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ ೧೧೦೦ ಸೋಂಕು ಪ್ರಕರಣಗಳು ಮಾತ್ರ ವರದಿಯಾಗಿದ್ದು, ಆ ಮೂಲಕ ದೆಹಲಿಯ ಸೋಂಕು ಸಕಾರಾತ್ಮಕದರ ಶೇ. ೧.೫ಕ್ಕೆ ಇಳಿಕೆಯಾಗಿದೆ. ಹೀಗಾಗಿ ಹಾಲಿ ಲಾಕ್ಡೌನ್ ಸೋಮವಾರಕ್ಕೆ ಅಂತ್ಯವಾಗಲಿದ್ದು, ಸೋಮವಾರದಿಂದ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ. ಸೋಮವಾರ ಬೆಳಿಗ್ಗೆ ೫ ಗಂಟೆಗೆ ಲಾಕ್ಡೌನ್ ಅಂತ್ಯವಾಗಲಿದ್ದು, ಪ್ರಮುಖವಾಗಿ ಅನ್ಲಾಕ್ ಪ್ರಕ್ರಿಯೆ ಮೊದಲ ಭಾಗವಾಗಿ ಕಟ್ಟಡ ನಿರ್ಮಾಣ ಚಟುವಟಿಕೆ ಮತ್ತು ಕಾರ್ಖಾನೆಗಳನ್ನು ಮೊದಲು ತೆರೆಯಲಾಗುತ್ತದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ನೆರವಾಗುತ್ತದೆ ಎಂದು ಹೇಳಿದರು.
ಜೂನ್ ೫ ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶಿಸುವ ಸಾಧ್ಯತೆ
ಬೆಂಗಳೂರು, ಮೇ ೨೮: ಕೇರಳಕ್ಕೆ ಮೇ ೩೧ ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ೫ ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆ ಇದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ. ಇನ್ನು ರಾಜ್ಯದಲ್ಲಿ ನಾಳಿನವರೆಗೂ ಕೆಲವು ಕಡೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತ : ಹಾನಿ ಕುರಿತು ಪ್ರಧಾನಿಗೆ ವರದಿ ಸಲ್ಲಿಸಿದ ಬಂಗಾಳ ಸಿಎಂ
ಕೋಲ್ಕತಾ, ಮೇ ೨೮: ಯಾಸ್ ಚಂಡಮಾರುತದಿAದಾಗಿ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿರುವ ಹಾನಿಯ ಕುರಿತು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ವರದಿ ಸಲ್ಲಿಸಿದ್ದಾರೆ. ಯಾಸ್ ಚಂಡಮಾರುತ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳದ ಪಶ್ಚಿಮ ಮೆದಿನಿಪುರ ಜಿಲ್ಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಂಡಮಾರುತದಿAದಾಗಿ ರಾಜ್ಯದಲ್ಲಿ ಸಂಭವಿಸಿರುವ ಹಾನಿಯ ಕುರಿತು ವರದಿ ಸಲ್ಲಿಕೆ ಮಾಡಿದ್ದಾರೆ.
ಗುಂಡಿನ ಚಕಮಕಿ: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ, ಮೇ ೨೮: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ. ಖಚಿತ ಮಾಹಿತಿಯನ್ನಾಧರಿಸಿ ಜಮ್ಮು-ಕಾಶ್ಮೀರ ವಿಶೇಷ ಕಾರ್ಯಾಚರಣೆ ತಂಡ ಶೋಪಿಯಾನ್ನ ಗನೌಪೋರಾದಲ್ಲಿ ಸೇನೆ ಮತ್ತು ಸಿಆರ್ಪಿಎಫ್ ಜಂಟಿಯಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಭದ್ರತಾ ಪಡೆಗಳು ನಿರ್ದಿಷ್ಟ ಸ್ಥಳದತ್ತ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು ಪರಸ್ಪರ ಗುಂಡಿನ ಚಕಮಕಿ ನಡೆದು ಓರ್ವ ಉಗ್ರ ಹತನಾಗಿದ್ದಾನೆ.
ಲಸಿಕೆಗಳು ಮಿಶ್ರಣ ಆರೋಪ : ಡಿಸಿಎಂ ಸ್ಪಷ್ಟನೆ
ಬೆಂಗಳೂರು, ಮೇ ೨೮: ರಾಜ್ಯದಲ್ಲಿ ಕೊರೊನಾ ವೈರಸ್ ಲಸಿಕೆಯ ವಿತರಣೆ ವೇಳೆ ಎರಡು ಕಂಪೆನಿಯ ಲಸಿಕೆಗಳು ಮಿಶ್ರಣ ಆಗಿರುವ ಕುರಿತು ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಜನರಿಗೆ ಒಂದೇ ಪ್ರಮಾಣದ ಕೋವಿಡ್-೧೯ ಲಸಿಕೆಗಳನ್ನು ನೀಡಲಾಗುತ್ತದೆ. ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮದೇ ಶೈಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎರಡು ವಿಭಿನ್ನ ಲಸಿಕೆಗಳ ಡೋಸ್ಅನ್ನು ಒಬ್ಬರಿಗೆ ನೀಡಿರುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಲಸಿಕೆಗಳ ಮಿಶ್ರಣ ಮಾಡಿ ನೀಡುವುದು ಕಾನೂನುಬದ್ಧವಾಗಿಲ್ಲ ಎಂದು ಹೇಳಿದ್ದಾರೆ.