ಮಡಿಕೇರಿ, ಮೇ ೨೮: ಜಿಲ್ಲೆಯಲ್ಲಿ ಶುಕ್ರವಾರ ೨೦೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೮೨ ಆರ್‌ಟಿಪಿಸಿಆರ್ ಮತ್ತು ೨೭ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೪೬, ಸೋಮವಾರಪೇಟೆ ತಾಲೂಕಿನಲ್ಲಿ ೧೨೪, ವೀರಾಜಪೇಟೆ ತಾಲೂಕಿನಲ್ಲಿ ೩೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೩,೭೧೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೭೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೦,೮೧೯ ಮಂದಿ ಗುಣಮುಖರಾಗಿದ್ದಾರೆ. ೨೫೯೦ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೫ ಸಾವು ಉಂಟಾಗಿದ್ದು, ಒಟ್ಟು ೩೦೯ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೩೬೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೧೧.೨೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.